ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸನ್‌ ಟಿ.ವಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಬಂಧನ

ಲೈಂಗಿಕ ಕಿರುಕುಳ ಆರೋಪ
Last Updated 26 ಡಿಸೆಂಬರ್ 2014, 12:16 IST
ಅಕ್ಷರ ಗಾತ್ರ

ಚೆನೈ (ಪಿಟಿಐ): ಮಹಿಳಾ ಸಹೋದ್ಯೋಗಿ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಟಿ.ವಿಯ ಹಿರಿಯ ಅಧಿಕಾರಿ ಒಬ್ಬರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಕೇಂದ್ರ ಅಪರಾಧ ದಳ ಅಧಿಕಾರಿಗಳು ಸನ್‌ ಟಿ.ವಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸಿ. ಪ್ರವೀಣ್‌ ಅವರನ್ನು ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧಿಸಿದ್ದಾರೆ.

‘ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರವೀಣ್‌ ಅವರು  ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದ ಮೇಲೆ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಕೇಂದ್ರ ತನಿಖಾ ದಳದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಕೇರಳ ಮೂಲದವರು. ಪ್ರಕರಣಕ್ಕೆ ಪೂರಕವಾಗಿ ಕೆಲವು ಆಧಾರಗಳನ್ನು ಸಂತ್ರಸ್ತೆಯು ಒದಗಿಸಿದ್ದಾರೆ’  ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT