ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸರ್ಕಾರದಿಂದ ರಾಜಾ ಭಯ್ಯಾ ರಕ್ಷಣೆ'

ಡಿಎಸ್ಪಿ ಹತ್ಯೆ ಪ್ರಕರಣ
Last Updated 6 ಮಾರ್ಚ್ 2013, 9:53 IST
ಅಕ್ಷರ ಗಾತ್ರ

ನವದೆಹಲಿ / ಪ್ರತಾಪ್‌ಗಡ (ಪಿಟಿಐ) : ಪ್ರತಾಪ್‌ಗಡದಲ್ಲಿ ಮಾರ್ಚ್ 3ರಂದು ನಡೆದ ಡಿಎಸ್ಪಿ ಜಿಯಾ-ಉಲ್-ಹಕ್ ಅವರ ಹತ್ಯೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರವು ಮಾಜಿ ಸಚಿವ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರ ರಕ್ಷಣೆಗೆ ನಿಂತಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಬುಧವಾರ ಆರೋಪಿಸಿದರು.

ವರದಿಗಾರರೊಂದಿಗೆ ಮಾತನಾಡಿದ ಅವರು ಡಿಎಸ್ಪಿ ಹತ್ಯೆಗೆ ಸಂಬಂಧಿಸಿದಂತೆ ರಾಜಾ ಭಯ್ಯಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೂ ಅವರನ್ನು ಬಂಧಿಸದೇ ಸರ್ಕಾರವು ಅವರ ರಕ್ಷಣೆಗೆ ನಿಂತಿದೆ ಎಂದರು.

ಅಲ್ಲದೆ ಅಲಿಘಡ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆಯೂ ರಘುರಾಜ್ ಪ್ರತಾಪ್ ಸಿಂಗ್ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರನ್ನು ಇದುವರೆಗೂ ಬಂಧಿಸಲಾಗಿಲ್ಲ ಎಂದು ಮಾಯಾವತಿ ಹೇಳಿದರು.

ತಪ್ಪಿತಸ್ಥರ ವಿರುದ್ಧ ಕ್ರಮ : ಡಿಎಸ್ಪಿ ಜಿಯಾ - ಉಲ್-ಹಕ್ ಹತ್ಯೆ ಮತ್ತು ಕುಂದಾ ಗ್ರಾಮದ ಮುಖ್ಯಸ್ಥರ ಹತ್ಯೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬುಧವಾರ ಭರವಸೆ ನೀಡಿದರು.

ಕುಂದಾ ಗ್ರಾಮದ ಮುಖ್ಯಸ್ಥ ನನ್ಹೆ ಯಾದವ್ ಅವರ ಕುಟುಂಬದವರನ್ನು ಭೇಟಿ ಮಾಡಿದ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಅವರು ಪ್ರಕರಣದ ಸಿಬಿಐ ತನಿಖೆ ನಡೆಯಲಿದ್ದು, ರಾಜ್ಯ ಸರ್ಕಾರ ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದೆ. ತನಿಖೆ ಮುಗಿದ ಮೇಲೆ ಸತ್ಯಾಂಶ ಹೊರಬೀಳಲಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT