ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವ ಪಕ್ಷದಿಂದ ಪ್ರಧಾನಿ ಭೇಟಿ?

Last Updated 19 ಏಪ್ರಿಲ್ 2015, 19:30 IST
ಅಕ್ಷರ ಗಾತ್ರ

ನವದೆಹಲಿ: ಮಾತೃಭಾಷೆ ಶಿಕ್ಷಣ ಹಾಗೂ ಮೇಕೆದಾಟು ಯೋಜನೆ ಕುರಿತು ಚರ್ಚಿಸಲು ರಾಜ್ಯದ ಸರ್ವ ಪಕ್ಷಗಳ ನಿಯೋಗ ಈ ತಿಂಗಳ 22ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಪ್ರಧಾನಿ ಅವರನ್ನು ಭೇಟಿ ಮಾಡಲು ಸಮಯ ಕೇಳಲಾಗಿದೆ. ಭೇಟಿಗೆ ಅವಕಾಶ ಸಿಕ್ಕರೆ ಮಾತೃಭಾಷೆ ಶಿಕ್ಷಣಮಾಧ್ಯಮ ಹಾಗೂ ಮೇಕೆದಾಟು ಯೋಜನೆಗಳನ್ನು ಕುರಿತು ಮನವರಿಕೆ ಮಾಡಿಕೊಡಲಾಗುವುದು ಎಂದು ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೊದಲು ಸರ್ವ ಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ ಎಂದೂ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಬೆಂಗಳೂರು ಮಹಾನಗರಪಾಲಿಕೆಯನ್ನು ಆಡಳಿತದ ದೃಷ್ಟಿಯಿಂದ ವಿಭಜನೆ ಮಾಡಲು ಆಲೋಚಿಸಲಾಗಿದೆ. ಬಿಬಿಎಂಪಿ ವಿಭಜನೆ ಭರವಸೆ ಚುನಾವಣೆ ಪ್ರಣಾಳಿಕೆಯಲ್ಲೇ ನೀಡಲಾಗಿತ್ತು. ಇದು ಹೊಸ ಕಾರ್ಯಕ್ರಮವಲ್ಲ ಎಂದು ಅವರು ತಿಳಿಸಿದರು.

ಚುನಾವಣೆಗೆ ಹೆದರಿ ಚುನಾವಣೆ ಮುಂದಕ್ಕೆ ಹಾಕುತ್ತಿಲ್ಲ. ಚುನಾವಣೆ ಯಾವಾಗ ನಡೆಸಬೇಕು. ಹೇಗೆ ನಡೆಸಬೇಕು ಎಂದು ಯಾರಿಂದಲೂ ಪಾಠ ಹೇಳಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದೂ ಅವರು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT