ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲ್ಮಾನ್‌ ಖಾನ್‌ಗೆ ರಾಷ್ಟ್ರೀಯ ಮಹಿಳಾ ಆಯೋಗದಿಂದ ನೋಟಿಸ್‌

Last Updated 29 ಜೂನ್ 2016, 14:19 IST
ಅಕ್ಷರ ಗಾತ್ರ

ನವದೆಹಲಿ/ಮುಂಬೈ (ಪಿಟಿಐ): ‘ಸುಲ್ತಾನ್’ ಸಿನಿಮಾದ ಚಿತ್ರೀಕರಣದ ಸುಸ್ತನ್ನು ಅತ್ಯಾಚಾರಕ್ಕೊಳಗಾದ ಮಹಿಳೆಯ ಯಾತನೆಗೆ ಹೋಲಿಸಿ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಜುಲೈ 7ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ವಿವಾದಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಖಾನ್ ಈವರೆಗೂ ಬಹಿರಂಗವಾಗಿ ಕ್ಷಮೆ ಕೇಳಿಲ್ಲ ಎಂದು ಆಯೋಗದ ಅಧ್ಯಕ್ಷ ಲಲಿತಾ ಕುಮಾರಮಂಗಲಂ ಹೇಳಿದ್ದಾರೆ.

ಖಾನ್ ಇಂದು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರು ವಕೀಲರ ಮೂಲಕ ನೋಟಿಸ್‌ಗೆ ಉತ್ತರ ನೀಡಿದ್ದಾರೆ. ಅದು ಕ್ಷಮೆ ಕೇಳುವ ದಾಟಿಯಲ್ಲಿ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಖಾನ್ 7ರ ಒಳಗೆ ವಿಚಾರಣಗೆ ಹಾಜರಾಗದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೆಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT