ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಕ್ಷ್ಯಾಧಾರ ಕೊರತೆ: ಗಿರೀಶ್ ಮಟ್ಟಣ್ಣವರ್ ಖುಲಾಸೆ

Last Updated 27 ಜೂನ್ 2016, 14:49 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕರ ಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ ಗಿರೀಶ್ ಮಟ್ಟಣ್ಣವರ್ ಸೇರಿ ಮೂವರನ್ನು 66ನೇ ಸೆಷನ್ಸ್ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ.

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿತು.

ಏನಿದು ಘಟನೆ: 2003ರ ನವೆಂಬರ್‌ 1ರಂದು ವಿಧಾನಸೌಧದ ಪಕ್ಕದಲ್ಲಿರುವ ಶಾಸಕರ ಭವನದ ಐದನೇ ಮಹಡಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಬಂದ ಕರೆ ಮೇರೆಗೆ ತಪಾಸಣೆ ನಡೆಸಲಾಗಿತ್ತು. ನಂತರ ಅದು ಹುಸಿ ಬಾಂಬ್‍ ಎಂದು ಗೊತ್ತಾಯಿತು. ಈ ಸಂಬಂಧ ತನಿಖೆಯ ವೇಳೆ ಪೊಲೀಸರು ಮಟ್ಟಣ್ಣವರ್‌ ಹಾಗೂ ಇತರ ಆರೋಪಿಗಳನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT