ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ, ಜಾತಿ ಸಮೀಕ್ಷೆಗೆ ಚಾಲನೆ

Last Updated 27 ಫೆಬ್ರುವರಿ 2015, 8:45 IST
ಅಕ್ಷರ ಗಾತ್ರ

ಯಳಂದೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಹಾಗೂ ಜಾತಿ ಸಮೀಕ್ಷೆಗೆ ಪೈಲಟ್‌ ಗ್ರಾಮವಾಗಿ ಆಯ್ಕೆಯಾಗಿರುವ ಉಪ್ಪಿನಮೋಳೆ ಗ್ರಾಮದಲ್ಲಿ ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರ ಮನೆಯಿಂದ ಮಾಹಿತಿ ಕಲೆ ಹಾಕುವ ಮೂಲಕ ಗುರುವಾರ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ. ಸಿದ್ದು ಮಾತನಾಡಿ, ರಾಜ್ಯದಾದ್ಯಂತ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಪ್ರಾಯೋಗಿಕವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಒಂದೊಂದು ಪೈಲಟ್‌ ಗ್ರಾಮವಾಗಿ ಆಯ್ಕೆ ಮಾಡಿಕೊಂಡು ಸಮೀಕ್ಷೆ ನಡೆಸಲಾಗುತ್ತಿದೆ. ಇದರಂತೆ ತಾಲ್ಲೂಕಿನ ಉಪ್ಪಿನಮೋಳೆ ಗ್ರಾಮದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಮೆನಯಿಂದ ಇದಕ್ಕೆ ಚಾಲನೆ ನೀಡಲಾಗಿದೆ.

ಏಪ್ರಿಲ್‌ ತಿಂಗಳಿಂದ ಎಲ್ಲ ಕಡೆಯೂ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ ಪಟ್ಟಣದ ಸಿಡಿಎಸ್ ಸಮುದಾಯ ಭವನದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ. ಸಮೀಕ್ಷೆಗೆ ಬರುವ ವೇಳೆ ಸಾರ್ವಜನಿಕರು ಸರಿಯಾದ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಇದರಲ್ಲಿ 50ಕ್ಕೂ ಹೆಚ್ಚು ಕಾಲಂಗಳಿವೆ. ಜಾತಿ, ಆಸ್ತಿ, ದೂರವಾಣಿ ಸೇರಿದಂತೆ ಇಡೀ ಕುಟುಂಬದ ಮಾಹಿತಿ ಗೊತ್ತಾಗಲಿದೆ. ಎಲ್ಲಾ ಜನಾಂಗದವರೂ ತಪ್ಪದೆ ಈ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಇದರಿಂದ ಸರ್ಕಾರದ ಯೋಜನೆಗಳು ನೇರವಾಗಿ ಸಾರ್ವಜನಿಕರಿಗೆ ತಲುಪಲು ಅನುಕೂಲವಾಗಲಿದೆ ಎಂದರು.

ಉಪ ತಹಶೀಲ್ದಾರ್‌ ವೈ.ಎಂ. ನಂಜಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಉಮಾಶಂಕರ್‌, ಶಿಕ್ಷಕರ  ಸಂಘದ ವೀರಭದ್ರಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT