ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಜಾಲತಾಣ ಅಧಿಕಾರಿಗಳಿಗೆ ಮುಕ್ತ

Last Updated 20 ಜುಲೈ 2016, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಧಿಕಾರಿಗಳು ಇನ್ನು ಮುಂದೆ ಮುಕ್ತವಾಗಿ ಫೇಸ್‌ಬುಕ್‌, ಟ್ವೀಟರ್‌, ಲಿಂಕ್ಡಿನ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ  ಅಭಿಪ್ರಾಯ ಹಂಚಿಕೊಳ್ಳಬಹುದು. ಆದರೆ, ಸರ್ಕಾರವನ್ನು ಯಾವುದೇ ಕಾರಣಕ್ಕೂ ಟೀಕಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ  ಸೂಚಿಸಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಈ ಬಗ್ಗೆ ನಿಯಮಾವಳಿಗಳನ್ನು ರೂಪಿಸಿದೆ. ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಎಚ್ಚರವಹಿಸಬೇಕು. ಟೆಲಿವಿಷನ್‌, ಸಾಮಾಜಿಕ ಜಾಲತಾಣಗಳು ಅಥವಾ ವ್ಯಂಗ್ಯಚಿತ್ರಗಳ ಮೂಲಕ ಸರ್ಕಾರವನ್ನು ಟೀಕಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆಗಳನ್ನು ನೀಡಿ ಸರ್ಕಾರಕ್ಕೆ ಮುಜುಗರ ಮಾಡಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ನಿಯಮಾವಳಿಯಲ್ಲಿ ತಿಳಿಸಲಾಗಿದೆ.

ಸರ್ಕಾರದ ನೀತಿಗಳು ಅಥವಾ ಕ್ರಮಗಳು, ರಾಜ್ಯ ಮತ್ತು ವಿದೇಶಗಳ ಜತೆ ಕೇಂದ್ರ ಸರ್ಕಾರದ ಸಂಬಂಧ ಸೇರಿದಂತೆ ಮುಂತಾದ ವಿಷಯಗಳ ಬಗ್ಗೆ ಟೀಕೆ ಮಾಡಬಾರದು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT