ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಬಾಧೆ: ರೈತ ಆತ್ಮಹತ್ಯೆ

Last Updated 9 ಅಕ್ಟೋಬರ್ 2015, 20:01 IST
ಅಕ್ಷರ ಗಾತ್ರ

ಚನ್ನಪಟ್ಟಣ: ಸಾಲದ ಬಾಧೆಯಿಂದ ಬೇಸತ್ತು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತರೊಬ್ಬರು ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ತಾಲ್ಲೂಕಿನ ನುಣ್ಣೂರು ಗ್ರಾಮದ ಮರೀಗೌಡ (55) ಮೃತಪಟ್ಟ ರೈತ. ಇವರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಮಗ ಇದ್ದಾರೆ. ಇವರು ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಬುಧವಾರ ರೇಷ್ಮೆ ಮಾರುಕಟ್ಟೆಗೆ ರೇಷ್ಮೆಗೂಡು ತಂದಿದ್ದ ಇವರು ಸರಿಯಾದ ಬೆಲೆ ಸಿಗದ ಕಾರಣ ಬೇಸತ್ತು ಮನೆಗೆ ಹೋಗಿ ಕ್ರಿಮಿನಾಶಕ ಸೇವಿಸಿದ್ದರು. ರೇಷ್ಮೆ ಬೆಳೆಯಲು ಸಾಲ ಮಾಡಿಕೊಂಡಿದ್ದ ಇವರು, ಖಾಸಗಿ ವ್ಯಕ್ತಿಗಳ ಬಳಿಯೂ ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT