ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ವೈದ್ಯಕೀಯ ಪರೀಕ್ಷೆಗೆ 195 ಅಂಗವಿಕಲರು ಹಾಜರು

Last Updated 3 ಜೂನ್ 2015, 20:08 IST
ಅಕ್ಷರ ಗಾತ್ರ

ಬೆಂಗಳೂರು: ಈ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ರ್‍್ಯಾಂಕ್‌ ಗಳಿಸಿದ್ದ  195 ಅಂಗವಿಕಲ ಅಭ್ಯರ್ಥಿಗಳು ಬುಧವಾರ ನಡೆದ ವೈದ್ಯಕೀಯ ಪರೀಕ್ಷೆಗೆ ಹಾಜರಾದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ  ಪ್ರಾಧಿಕಾರದ (ಕೆಇಎ)  ಕಚೇರಿಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಿತು. ಇದೇ ಸಂದರ್ಭದಲ್ಲಿ ಅವರ ದಾಖಲೆಗಳ ಪರಿಶೀಲನೆಯನ್ನೂ ನಡೆಸಲಾಯಿತು.

ಎನ್‌ಸಿಸಿ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಯೂ ಬುಧವಾರ ನಡೆದಿದೆ.

ಗುರುವಾರ ಕ್ರೀಡಾ ಕೋಟಾದ ರ್‍್ಯಾಂಕ್‌ ವಿಜೇತರ ದಾಖಲೆಗಳನ್ನು ಕೆಇಎ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಇತರ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ರಾಜ್ಯದ 12 ಸಹಾಯ ಕೇಂದ್ರಗಳಲ್ಲಿ ಜೂನ್‌ 5ರಿಂದ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT