ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಕ್ಕಿಂನಲ್ಲಿ ಐದನೇ ಬಾರಿಗೆ ಎಸ್‌ಡಿಎಫ್‌ ಅಧಿಕಾರಕ್ಕೆ

Last Updated 17 ಮೇ 2014, 19:30 IST
ಅಕ್ಷರ ಗಾತ್ರ

ಗ್ಯಾಂಗ್ಟಕ್‌: 32 ಸದಸ್ಯ ಬಲದ ಸಿಕ್ಕಿಂ ವಿಧಾನಸಭೆಯಲ್ಲಿ 22 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಸಿಕ್ಕಿಂ ಡೆಮಾಕ್ರಟಿಕ್‌ ಫ್ರಂಟ್‌ (ಎಸ್‌ಡಿಎಫ್‌) ಸತತ ಐದನೇ ಬಾರಿಗೆ ಅಧಿಕಾರಕ್ಕೆ ಬಂದಿದೆ.

ಮುಖ್ಯಮಂತ್ರಿ ಪವನ್‌ ಚಾಮ್ಲಿಂಗ್‌ ಅವರು ನಾಮ್ಚಿ ಸಿಂಘಿಥಾಂಗ್‌ ಕ್ಷೇತ್ರದಿಂದ ಪುನರಾಯ್ಕೆ ಆಗಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಸಿಕ್ಕಿಂ ಕ್ರಾಂತಿಕಾರಿ ಮೊರ್ಚಾದ (ಎಸ್‌ಕೆಎಂ )ಅಭ್ಯರ್ಥಿ ಮಿಲಾನ್‌ ರಾಯ್‌ ಅವರನ್ನು 1,084 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಚಾಮ್ಲಿಂಗ್‌ ಅವರು ಸತತ ಕಳೆದ 20 ವರ್ಷಗಳಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಂತೂ ಎಸ್‌ಡಿಎಫ್‌ ವಿಧಾನಸಭೆಯ ಎಲ್ಲ 32 ಸ್ಥಾನಗಳಲ್ಲಿ ಜಯಗಳಿಸಿ ಇತಿಹಾಸ ನಿರ್ಮಿಸಿತ್ತು. ಆದರೆ, ಈ ಬಾರಿ ಎಸ್‌ಕೆಎಂ ಮೂರು ಸ್ಥಾನಗಳಲ್ಲಿ ಜಯಗಳಿಸಿ ವಿಧಾನಸಭೆ ಪ್ರವೇಶಿಸಿದೆ.

ಅರುಣಾಚಲದಲ್ಲಿ ಕಾಂಗ್ರೆಸ್‌
ಇಟಾನಗರ: ಮೋದಿ ಅಲೆಯಿಂದ ದೇಶದಾದ್ಯಂತ ಕಾಂಗ್ರೆಸ್‌ ಕೊಚ್ಚಿ ಹೋಗಿದ್ದರೂ ಅರುಣಾಚಲ ಪ್ರದೇಶದಲ್ಲಿ ಮಾತ್ರ ಕಾಂಗ್ರೆಸ್‌ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್‌ 42 ಸ್ಥಾನಗಳಲ್ಲಿ ಜಯಗಳಿಸಿದೆ. 11 ಕ್ಷೇತ್ರಗಳಲ್ಲಿ ಬಿಜೆಪಿ ಜಯಶಾಲಿಯಾಗಿದೆ. ಪಿಪಿಎ 5 ಮತ್ತು ಇಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT