ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಐ(ಎಂ): ನಾಯಕತ್ವ ಬದಲಾವಣೆ ಕೂಗು

Last Updated 3 ಜೂನ್ 2014, 11:09 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಇಲ್ಲಿ ನಡೆಯುತ್ತಿರುವ ಸಿಪಿಐ(ಎಂ) ಪಕ್ಷದ ಪಶ್ಚಿಮ ಬಂಗಾಳ ರಾಜ್ಯ ಸಮಿತಿ ಸಭೆಯಲ್ಲಿ ಪಕ್ಷದ ನಾಯಕತ್ವ ಬದಲಾವಣೆಯ ಕೂಗು ಬಲವಾಗಿ ಕೇಳಿಬಂದಿದೆ ಎಂದು ಪಕ್ಷದ ಬಲ್ಲ ಮೂಲಗಳು ತಿಳಿಸಿವೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಕಾರಟ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮನ್‌ ಬೋಸ್‌, ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸೂರ್ಯಕಾಂತ್‌ ಮಿಶ್ರಾ ಅವರು ಪಕ್ಷ ಸಂಘಟಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪಕ್ಷದ ರಾಜ್ಯ ಸಮಿತಿ ಸದಸ್ಯರು ದೂರಿದ್ದಾರೆ.

ಕಳೆದ 60 ವರ್ಷಗಳ ಇತಿಹಾಸದಲ್ಲಿ ಪಕ್ಷ ಹೀನಾಯವಾಗಿ ಸೋಲು ಕಂಡಿದೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕಾದರೆ ನಾಯಕತ್ವ ಬದಲಾಗಬೇಕು ಎಂಬ ಕೂಗು ಸಭೆಯಲ್ಲಿ ಕೇಳಿ ಬಂದಿದೆ. 

ರಾಜ್ಯ ಸಮಿತಿ ಸಭೆ ನಿನ್ನೆ ಆರಂಭವಾಗಿದೆ. ಸಭೆಯಲ್ಲಿ ಪ್ರಕಾಶ್‌ ಕಾರಟ್‌, ತ್ರಿಪುರ ಮುಖ್ಯಮಂತ್ರಿ ಮಾಣಿಕ್‌ ಸರ್ಕಾರ್‌, ಪಾಲಿಟ್‌ಬ್ಯೂರೋ ಸದಸ್ಯ ಸೀತಾರಾಂ ಯಚೂರಿ ಮುಂತಾದವರು ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT