ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐಗೆ ನಿರ್ದೇಶಕರ ನೇಮಕ: ಪ್ರಕ್ರಿಯೆ ಆರಂಭ

Last Updated 24 ನವೆಂಬರ್ 2014, 15:57 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಿಬಿಐ ನಿರ್ದೇ­ಶಕ ರಂಜಿತ್‌ ಸಿನ್ಹಾ ಅಧಿಕಾರದ ಅವಧಿ ಮುಗಿಯಲು  ಇನ್ನೊಂದು ವಾರ ಬಾಕಿ ಇರುವಾ­ಗಲೇ ಹೊಸ ನಿರ್ದೇಶಕರ ನೇಮಕಕ್ಕೆ ಕೇಂದ್ರ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ.

ಸಿಬಿಐ ನಿರ್ದೇಶಕರನ್ನು ನೇಮಕ ಮಾಡುವುದಕ್ಕೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡಲು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಓಪಿಟಿ) ಅರ್ಹತಾ ಮಾನದಂಡಗಳನ್ನು ಹೊಂದಿ­ರುವ ಹಿರಿಯ ಐಪಿಎಸ್‌ ಅಧಿಕಾರಿಗಳ ಹೆಸರು­ಗಳನ್ನು ಕೋರಿದೆ ಎಂದು ಅಧಿ­ಕೃತ ಮೂಲಗಳು ತಿಳಿಸಿವೆ. ಸಿಬಿಐ ನಿರ್ದೇ­­­ಶಕ ರಂಜಿತ್‌ ಸಿನ್ಹಾ ಅಧಿಕಾರದ ಅವಧಿ ಡಿ.2 ರಂದು ಕೊನೆಗೊಳ್ಳಲಿದೆ.

ಲೋಕಪಾಲ್‌ ಕಾಯಿದೆಯಂತೆ ಸಿಬಿಐ ನಿರ್ದೇಶಕರ ಆಯ್ಕೆಯನ್ನು ಪ್ರಧಾನಿ ನೇತೃತ್ವದಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಅಥವಾ ಅವರು ನಾಮನಿರ್ದೇಶನ ಮಾಡುವ ನ್ಯಾಯ­ಮೂರ್ತಿ­ಯೊಬ್ಬರು ಸದಸ್ಯರಾ­ಗಿರುವ ಆಯ್ಕೆ ಸಮಿತಿಯು ಸೂಚಿಸಿದ ಹೆಸ­ರಿನ ಅಧಾರದ ಮೇಲೆ ಕೇಂದ್ರ ಸರ್ಕಾರ ನಡೆಸಲಿದೆ.

ಸೇವಾ ಹಿರಿತನ, ಸಮಗ್ರತೆ ಮತ್ತು ಭ್ರಷ್ಟಾಚಾರ ಪ್ರಕರಣಗಳ ತನಿಖೆಯ ಅನುಭವದ ಆಧಾರದ ಮೇಲೆ ಐಪಿಎಸ್‌ ಅಧಿಕಾರಿಗಳ ಪಟ್ಟಿಯನ್ನು ಗೃಹ ಖಾತೆಯು ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ನೀಡುತ್ತದೆ. ಈ ಪಟ್ಟಿಯನ್ನು ಆಯ್ಕೆ ಸಮಿತಿಗೆ ಕಳುಹಿಸ­ಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT