ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಯಾಚಿನ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿ

Last Updated 23 ಅಕ್ಟೋಬರ್ 2014, 6:00 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಹಾಗೂ ಪ್ರತಿಯೊಬ್ಬ ದೇಶವಾಸಿ ಬೆಂಬಲವೂ ನಿಮಗಿದೆ ಎಂಬ ಸಂದೇಶವನ್ನು ತಲುಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಿಯಾಚಿನ್‌ಗೆ ತೆರಳಿದ್ದಾರೆ.

ಬಳಿಕ ಮೋದಿ ಅವರು ಶ್ರೀನಗರದಲ್ಲಿ ಪ್ರವಾಹ ಸಂತ್ರಸ್ತರೊಂದಿಗೆ ಬೆಳಕಿನ ಹಬ್ಬವನ್ನು ಆಚರಿಸಲಿದ್ದಾರೆ.

‘ಸ್ನೇಹಿತರೆ ನಾನು ಸಿಯಾಚಿನ್‌ಗೆ ತೆರಳುತ್ತಿದ್ದೇನೆ. ಈ ವಿಶೇಷ ದಿನವನ್ನು ವೀರ ಯೋಧರೊಂದಿಗೆ ಕಳೆಯಲು ಸಾಧ್ಯವಾಗುತ್ತಿರುವುದು ನಮ್ಮ ಅದೃಷ್ಟ’ ಎಂದು ಪ್ರವಾಸಕ್ಕೂ ಮುನ್ನ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

‘ನಾವು ಯಾವಾಗಲೂ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ ಎಂಬ ಸಂದೇಶವನ್ನು ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಸೈನಿಕರಿಗೆ ತಲುಪಿಸಲು ತೆರಳುತ್ತಿರುವೆ’ ಎಂದು ಅವರು ಹೇಳಿದ್ದಾರೆ.

ಅಲ್ಲದೇ, ‘ಸಿಯಾಚಿನ್ ಭೇಟಿಯ ಬಳಿಕ ಶ್ರೀನಗರದಲ್ಲಿ ಇತ್ತೀಚಿಗೆ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರೊಂದಿಗೆ ಸಮಯ ಕಳೆಯುವೆ’ ಎಂದೂ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT