ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಸೋಡಿಯಾ ಸೇರಿ 60 ಎಎಪಿ ಶಾಸಕರು ಪೊಲೀಸ್‌ ವಶಕ್ಕೆ

ಶಾಸಕ ದಿನೇಶ್ ಮೊಹಾನಿಯಾ ಬಂಧನ ಖಂಡಿಸಿ ಪ್ರತಿಭಟನಾ ಮೆರವಣಿಗೆ
Last Updated 26 ಜೂನ್ 2016, 7:33 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಎಎಪಿ ಶಾಸಕ ದಿನೇಶ್ ಮೊಹಾನಿಯಾ ಅವರ ಬಂಧನ ಖಂಡಿಸಿ ಭಾನುವಾರ ಪ್ರಧಾನಿ ನಿವಾಸದತ್ತ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳುತ್ತಿದ್ದವರನ್ನು ತಡೆದಿರುವ ಪೊಲೀಸರು, ದೆಹಲಿಯ ಉಪ ಮುಖ್ಯಮಂತ್ರಿ ಮನಿಷ್‌ ಸಿಸೋಡಿಯಾ ಸೇರಿದಂತೆ ಎಎಪಿಯ 60 ಶಾಸಕರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಧಾನಿ ಅಧಿಕೃತ ನಿವಾಸ ಪ್ರದೇಶದಲ್ಲಿನ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಮುನ್ನುಗ್ಗಲು ಯತ್ನಿಸಿದ ಶಾಸಕರನ್ನು ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಲೈಂಗಿಕ ಕಿರುಕುಳ ನೀಡಿದ ಆಪಾದನೆ ಮೇಲೆ ಶನಿವಾರ ಎಎಪಿ ಶಾಸಕ ದಿನೇಶ್ ಮೊಹಾನಿಯಾ ಅವನ್ನು ಬಂಧಿಸಲಾಗಿದೆ. ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಸಿಸೋಡಿಯಾ ಅವರನ್ನು ಸೋಮವಾರದವರೆಗೆ(ಜೂನ್‌ 27) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT