ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

Last Updated 5 ಜೂನ್ 2014, 19:30 IST
ಅಕ್ಷರ ಗಾತ್ರ

ಜೈಪುರ: ಅತ್ಯಾಚಾರಕ್ಕೊಳಗಾದ 17 ವರ್ಷದ ಬಾಲಕಿಯೊಬ್ಬಳು ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಮಹೇಶ್‌ ನಗರದಲ್ಲಿ ನಡೆದಿದೆ.

ಅತ್ಯಾಚಾರ ಎಸಗಿದ ಆರೋಪಿಯನ್ನು 25 ವರ್ಷದ ಮನೀಷ್‌ ಎಂದು ಗುರುತಿಸಲಾಗಿದೆ. ಪೋಷಕರೊಂದಿಗೆ ಬಾಲಕಿ ವಾಸಿಸುತ್ತಿದ್ದ ಕಟ್ಟಡದಲ್ಲಿಯೇ ಆರೋಪಿ ಬಾಡಿಗೆಗೆ ಇದ್ದ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

‘ಮಂಗಳವಾರ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಳು. ಇದನ್ನು ತಿಳಿದು ಆರೋಪಿ ಅತ್ಯಾಚಾರ ನಡೆಸಿದ್ದಾನೆ. ಆರೋಪಿಯ ಗೆಳೆಯ ರಾಜೇಂದ್ರ ಶರ್ಮಾ ಇಡೀ ಘಟನೆಯನ್ನು ಕಿಟಕಿಯಿಂದ ನೋಡಿಯೂ ಸುಮ್ಮನಿದ್ದ’ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಬಳಿಕ ಬಾಲಕಿಯು ಮನೆಯಲ್ಲಿದ್ದ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಕಂಡು ನೆರೆಯವರು ಸ್ಥಳಕ್ಕೆ ದೌಡಾಯಿಸಿ ಆಕೆಯನ್ನು ರಕ್ಷಿಸಿ ಕೂಡಲೇ ಸಮೀಪದ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ವಿವರಿಸಿದ್ದಾರೆ.

‘ವೈದ್ಯರು ನೀಡಿರುವ ಮಾಹಿತಿ ಮತ್ತು ಬಾಲಕಿಯ ಹೇಳಿಕೆಯನ್ನು ಮಂಗಳವಾರ ರಾತ್ರಿ ಪಡೆದುಕೊಂಡಿದ್ದೇವೆ’ ಎಂದು ಎಸಿಪಿ ಸೊದ್ಲಾ ಪ್ರೇಮ್‌ ದಾನ್‌ ರತ್ನು ತಿಳಿಸಿದ್ದಾರೆ.

ಬಾಲಕಿಯ ದೇಹದ ಮೇಲೆ ಶೇ 45ರಷ್ಟು ಸುಟ್ಟ ಗಾಯಗಳಾಗಿವೆ. ಇಲ್ಲಿನ ಎಸ್‌ಎಂಎಸ್‌ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT