ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ನ್ಯಾಯಮೂರ್ತಿಗಳ ಬಲ ಹೆಚ್ಚಳ

Last Updated 7 ಜುಲೈ 2014, 13:21 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ, ಆದರ್ಶ್ ಕುಮಾರ್‌ ಗೋಯಲ್‌ ಹಾಗೂ ಹಿರಿಯ ವಕೀಲ ರೋಹಿಂಟನ್‌ ಎಫ್‌ ನಾರಿಮನ್‌ ಅವರು ಸೋಮವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಮೂಲಕ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆರ್.ಎಂ. ಲೋಧಾ ಅವರನ್ನು ಸೇರಿದಂತೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

59 ವರ್ಷದ ಮಿಶ್ರಾ ಹಾಗೂ 61 ವರ್ಷದ ಗೋಯಲ್‌ ಅವರು ಈ ಮೊದಲು ಕ್ರಮವಾಗಿ ಕೋಲ್ಕತ್ತ ಹಾಗೂ ಒಡಿಶಾ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. 58 ವರ್ಷದ ರೋಹಿಂಟನ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿಯಾಗಿದ್ದರು.

ಈ ಮೂವರು ನ್ಯಾಯಮೂರ್ತಿಗಳಿಗೆ ಸಿಜೆಐ ಲೋಧಾ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು.

ಮುಖ್ಯನ್ಯಾಯಮೂರ್ತಿ ಹುದ್ದೆ ಸೇರಿದಂತೆ ಸುಪ್ರೀಂ ಕೋರ್ಟ್‌ನಲ್ಲಿ 31 ಜನ ನ್ಯಾಯಮೂರ್ತಿಗಳನ್ನು ಹೊಂದಲು ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT