ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಮಿತ್ರ ಮಹಾಜನ್ ಲೋಕಸಭೆ ಸ್ಪೀಕರ್?

Last Updated 5 ಜೂನ್ 2014, 12:44 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 16ನೇ ಲೋಕಸಭೆಯ ಸ್ಪೀಕರ್ ಆಗಿ ಸಂಸದೆ ಸುಮಿತ್ರ ಮಹಾಜನ್ ಆಯ್ಕೆಯಾಗಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಗುರುವಾರ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಮಿತ್ರಾ ಮಹಾಜನ್ ಸ್ಪೀಕರ್ ಆಗುವುದು ಬಹುತೇಕ ಖಚಿತ ಎಂದರು.  
ಅನುಭವಿ ಸಂಸದೀಯ ಪಟು ಎಂಬ ಹೆಗ್ಗಳಿಕೆಗೆ ಸುಮಿತ್ರಾ ಮಹಾಜನ್‌ ಪಾತ್ರರಾಗಿದ್ದಾರೆ. 

71 ವರ್ಷದ ಸುಮಿತ್ರಾ ಅವರು ಸತತ ಎಂಟು ಸಲ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಡಳಿತದಲ್ಲಿ ರಾಜ್ಯ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. 

ಮೀರಾ ಕುಮಾರ್ ಬಳಿಕ ಸ್ಪೀಕರ್ ಸ್ಥಾನವನ್ನು ಅಲಂಕರಿಸುತ್ತಿರುವ 2ನೇ ಮಹಿಳೆ ಎನ್ನಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT