ಇದೇ ವಾದವನ್ನು ಮುಂದಿಟ್ಟು ಕೋಲಿ ಸಹ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಈ ಮಧ್ಯೆ ಸೆಪ್ಟೆಂಬರ್ 12ರಂದು ಕೋಲಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತೆ ವಿಚಾರಣಾ ನ್ಯಾಯಾಲಯವು ಸೆ. 2ರಂದು ಆದೇಶ ಹೊರಡಿಸಿತ್ತು. ಆದರೆ, ಪಿಯುಡಿಆರ್ ಸಲ್ಲಿಸಿದ್ದ ಅರ್ಜಿ ಇತ್ಯರ್ಥವಾಗುವವರೆಗೂ ಕೋಲಿ ಶಿಕ್ಷೆ ಜಾರಿಗೆ ಹೈಕೋರ್ಟ್ ತಡೆಯಾಜ್ಞೆ ವಿಧಿಸಿತ್ತು.