ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಷ್ಮಾ ಅಭಿನಂದಿಸಿದ ಜಾನ್‌ ಕೆರಿ

Last Updated 29 ಮೇ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಅಮೆರಿಕದ ವಿದೇ­ಶಾಂಗ ಕಾರ್ಯದರ್ಶಿ ಜಾನ್‌ ಕೆರಿ ಸೇರಿದಂತೆ ಇತರ ದೇಶಗಳ ಅಧಿಕಾರಿಗಳು  ಗುರುವಾರ ದೂರವಾಣಿ ಕರೆ ಮಾಡಿ ಅಭಿನಂದಿಸಿದರು.

ಸುಷ್ಮಾ ಸ್ವರಾಜ್‌ ಅವರು ವಿದೇಶಾಂಗ ವ್ಯವಹಾರ­ಗಳ ಖಾತೆ ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಜಾನ್‌ ಕೆರಿ ಅವರು, ಭಾರತ ಮತ್ತು ಅಮೆರಿಕ ನಡುವಿನ  ಒಪ್ಪಂದಗಳನ್ನು ಗಟ್ಟಿಗೊಳಿಸುವ ಬಗ್ಗೆ  ಮಾತುಕತೆ ನಡೆಸಿದರು ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಭಾರತದೊಂದಿಗೆ ಅಮೆರಿಕದ  ವ್ಯಾಪಾರ ಮತ್ತು ಆರ್ಥಿಕ ವ್ಯವಹಾರವು ಸದ್ಯ ₨ 6 ಲಕ್ಷ ಕೋಟಿ ಇದ್ದು, ಅದನ್ನು ₨ 29 ಲಕ್ಷ ಕೋಟಿಗೆ ಹೆಚ್ಚಿಸುವ ಇಂಗಿತವನ್ನು ಕೆರಿ ಅವರು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT