ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ 5.7ರಷ್ಟು ಜಿಡಿಪಿ ಪ್ರಗತಿ ದಾಖಲಾಗಿರುವುದು ಹಣಕಾಸು ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆ (ಎಫ್‌ಐಐ) ಹರಿದು ಬರುತ್ತಿದೆ. ಸೂಚ್ಯಂಕ ಜಿಗಿತಕ್ಕೆ ಇದೇ ಪ್ರಮುಖ ಕಾರಣ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ಸೋಮವಾರವೇ ಬಿಎಸ್‌ಇ ಸೂಚ್ಯಂಕ ದಾಖಲೆ ಮಟ್ಟವಾದ 26,867 ಅಂಶಗಳಿಗೆ ಜಿಗಿದಿತ್ತು. ಮಂಗಳವಾರ 27,019 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿದೆ.