ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌದಿಯಲ್ಲಿ ಆತ್ಮಹತ್ಯಾ ದಾಳಿ: 21 ಸಾವು

Last Updated 23 ಮೇ 2015, 11:09 IST
ಅಕ್ಷರ ಗಾತ್ರ

ರಿಯಾದ್‌ (ಪಿಟಿಐ): ಐಎಸ್‌ ಉಗ್ರರು ಸೌದಿ ಅರೇಬಿಯಾದಲ್ಲಿ ನಡೆಸಿದ ಆತ್ಮಹತ್ಯಾ ಬಾಂಬ್‌ ದಾಳಿಗೆ 21 ಜನರು ಬಲಿಯಾಗಿದ್ದಾರೆ.

ಇಲ್ಲಿನ ಶಿಯಾ ಮಸೀದಿಯಲ್ಲಿ ಶುಕ್ರವಾರ ತಡ ರಾತ್ರಿ ಈ ಆತ್ಮಹತ್ಯಾ ಬಾಂಬ್‌ ದಾಳಿ ನಡೆದಿದೆ. ಪ್ರಾರ್ಥನೆ ಮುಗಿದ ಬಳಿಕ ಬಾಂಬ್‌ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 81ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಶಿಯಾ ಸಮುದಾಯದವರ ಪ್ರಾಬಲ್ಯವಿರುವ ಈ ಪ್ರಾಂತ್ಯದಲ್ಲಿ ಐಎಸ್‌ ಉಗ್ರರು ದಾಳಿ ನಡೆಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೌದಿಯ ಆರೋಗ್ಯ ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT