ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌರಶಕ್ತಿ ಹೆಚ್ಚು ಬಳಸಲು ಪ್ರಧಾನಿ ಮೋದಿ ಕರೆ

ಮನದ ಮಾತು
Last Updated 29 ನವೆಂಬರ್ 2015, 19:47 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ/ಐಎಎನ್‌ಎಸ್): ಜಾಗತಿಕ ಹವಾಮಾನ ವೈಪರೀತ್ಯ ತಡೆಗೆ ಶಕ್ತಿ ಸಂಪನ್ಮೂಲಗಳನ್ನು ಸಂರಕ್ಷಿಸುವುದು ಮತ್ತು ಸೌರಶಕ್ತಿಯ ಹೆಚ್ಚಿನ ಬಳಕೆ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ಯಾರಿಸ್‌ನಲ್ಲಿ ನಡೆಯಲಿರುವ ‘ಹವಾಮಾನ ವೈಪರೀತ್ಯ’ ಶೃಂಗಸಭೆಯ  ಹಿನ್ನೆಲೆಯಲ್ಲಿ ‘ಮನದ ಮಾತು’ ಬಾನುಲಿ ಭಾಷಣದಲ್ಲಿ ಅವರು ಮಾತನಾಡಿದರು. ಹವಾಮಾನ ಬದಲಾವಣೆ ಬಗ್ಗೆ ವಿಶ್ವವೇ ಗಮನಹರಿಸುತ್ತಿದೆ. ಭೂಮಿಯ ಉಷ್ಣಾಂಶ ಇನ್ನಷ್ಟು ಏರಿಕೆಯಾಗ ಬಾರದು. ಹಾಗೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ’ ಎಂದು  ಹೇಳಿದರು.

‘ಅಭಿವೃದ್ಧಿಶೀಲ ದೇಶಗಳು ವಾಯುಮಾಲಿನ್ಯಕ್ಕೆ ಹೆಚ್ಚಿನ ಕೊಡುಗೆ ನೀಡುತ್ತಿವೆ. ಭಾರತವೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಮಾಲಿನ್ಯ ತಡೆ  ನಿಟ್ಟಿನಲ್ಲಿ ಯೋಚಿಸಬೇಕಿದೆ’ ಅವರು ತಿಳಿಸಿದರು.

ಜಾಗತಿಕ ಹವಾಮಾನ ವೈಪರೀತ್ಯ ಶೃಂಗದಲ್ಲಿ ಪರಿಸರ ಮತ್ತು ಹವಾಮಾನ ವೈಪರೀತ್ಯಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದೇವೆ -ನರೇಂದ್ರ ಮೋದಿ, ಪ್ರಧಾನಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT