ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪೀಕರ್‌ ಪಕ್ಷಪಾತಿ: ರಾಹುಲ್‌ ಕಿಡಿ

Last Updated 6 ಆಗಸ್ಟ್ 2014, 14:20 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಲೋಕಸಭಾ ಸ್ಪೀಕರ್‌ ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ. ಕೇವಲ ಆಡಳಿತ ಪಕ್ಷಕ್ಕೆ ಮಾತ್ರ ಮಾತನಾಡಲು ಅವಕಾಶ ನೀಡುತ್ತಿದ್ದಾರೆ. ವಿರೋಧ ಪಕ್ಷಗಳಿಗೆ ಅಭಿಪ್ರಾಯ ತಿಳಿಸಲು ಅವಕಾಶ ನಿರಾಕರಿಸಲಾಗುತ್ತಿದೆ. ಇಲ್ಲಿ ಕೇವಲ ಒಬ್ಬ ವ್ಯಕ್ತಿಯ (ಮೋದಿ) ಮಾತನ್ನು ಮಾತ್ರ ಕೇಳಲಾಗುತ್ತಿದೆ’ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದರು.

ಬುಧವಾರ ಲೋಕಸಭೆಯಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕೋಮು ಗಲಭೆ ಮತ್ತು ಯುಪಿಎಸ್‌ಸಿ ಪರೀಕ್ಷೆ ಗೊಂದಲ ಕುರಿತು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊ­ಳ್ಳುತ್ತಿಲ್ಲ ಎಂದು ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದವು. ಈ ವೇಳೆ ಮಾತ­ನಾಡಲು ಎದ್ದುನಿಂತ ರಾಹುಲ್‌ ಅವರಿಗೆ ಅವಕಾಶ ನಿರಾಕರಿಸಲಾಯಿತು.

  ಈ ಕುರಿತು ಲೋಕಸಭೆ ಹೊರಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ರಾಹುಲ್‌, ಲೋಕಸಭೆಯಲ್ಲಿ ನಮಗೆ (ವಿರೋಧ ಪಕ್ಷಗಳಿಗೆ ) ಮಾತನಾಡಲು ಅವಕಾಶ ನೀಡುತ್ತಿಲ್ಲ. ಎನ್‌ಡಿಎ ಸರ್ಕಾರ ಬಂದ ಮೇಲೆ ಸದನದ ಒಳಗೆ ಗಲಭೆ ಹೆಚ್ಚಳವಾಗಿದೆ. ಸ್ಪೀಕರ್‌ ಕೂಡ ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸದನದಲ್ಲಿ ಮೊದಲ ಬಾರಿಗೆ ನೀವು ಗಟ್ಟಿಯಾಗಿ ಧ್ವನಿ ಎತ್ತಿದ್ದೀರಿ ಎಂಬ ವರದಿಗಾರರೊಬ್ಬರ ಪ್ರಶ್ನೆಗೆ, ನಾನು ಹಲವು ಬಾರಿ ಸದನದೊಳಗೆ ನನ್ನ ಧ್ವನಿ ಎತ್ತಿದ್ದೇನೆ’ ಎಂದು ರಾಹುಲ್‌  ಮಾರುತ್ತರ ನೀಡಿದರು.

ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರು ರಾಹುಲ್‌ ಆರೋಪವನ್ನು ಅಲ್ಲಗಳೆದಿದ್ದು, ಎಲ್ಲ ಪಕ್ಷಗಳಿಗೂ ಸಮಾನ ಅವಕಾಶ ನೀಡಲಾಗುತ್ತಿದೆ  ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಗದ್ದಲ ಎಬ್ಬಿಸಿದ ಹಿನ್ನಲೆಯಲ್ಲಿ  ಕಲಾಪವನ್ನು ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT