ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪ್ರಿಂಗ್‌ ತಯಾರಿ ಫ್ಯಾಕ್ಟರಿಯಲ್ಲಿ ಬೆಂಕಿ

ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿ
Last Updated 25 ಏಪ್ರಿಲ್ 2015, 20:22 IST
ಅಕ್ಷರ ಗಾತ್ರ

ಬೆಂಗಳೂರು: ಕೋರಮಂಗಲ ಸೇಂಟ್‌ ಜಾನ್ಸ್ ಆಸ್ಪತ್ರೆ ಸಮೀಪದ ಸ್ಟಂಪ್‌ ಶೂಲ್‌ ಮತ್ತು ಸೋಮಪ್ಪ ಸ್ಪ್ರಿಂಗ್‌ ಫ್ಯಾಕ್ಟರಿಯಲ್ಲಿ ಶನಿವಾರ ರಾತ್ರಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.

ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ಸ್ಪ್ರಿಂಗ್‌ ಫ್ಯಾಕ್ಟರಿ ಇದೆ. ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಿಂದ ಹೊಗೆ ಬರುತ್ತಿದ್ದುದ್ದನ್ನು ನೋಡಿದ ಭದ್ರತಾ ಸಿಬ್ಬಂದಿ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. 9 ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ 3 ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದರು.

ಶಾರ್ಟ್‌ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ವಿದ್ಯುತ್‌ ವೈರ್‌ ಮೂಲಕ ಇಡೀ ಮಹಡಿಗೆ ಬೆಂಕಿ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಸ್ಪ್ರಿಂಗ್‌ ವಸ್ತುಗಳು. ಎಲೆಕ್ಟ್ರಾನಿಕ್ಸ್‌ ಉಪಕರಣಗಳು, ಪೀಠೋಪಕರಣಗಳು ಸುಟ್ಟುಹೋಗಿವೆ. ಯಾವುದೇ  ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.‌ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT