ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಮಸಂಗ್‌ ಮುಖ್ಯಸ್ಥರಿಗೆ ನ್ಯಾಯಾಲಯದ ಎದುರು ಹಾಜರಾಗಲು ಸುಪ್ರೀಂ ಸೂಚನೆ

Last Updated 2 ಏಪ್ರಿಲ್ 2014, 9:09 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸ್ಯಾಮಸಂಗ್‌ ಎಲೆಕ್ಟ್ರಾನಿಕ್ಸ್‌ ಕಂಪೆನಿಯ ಮುಖ್ಯಸ್ಥರ ವಿರುದ್ಧ ಹೊರಿಸಲಾಗಿರುವ 1.4 ಶತಕೋಟಿ ರೂಪಾಯಿ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಲೀ ಕುನ್ ಹೀ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನೋಟಿಸ್ ಜಾರಿಮಾಡಿದೆ.

ಲೀ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜಿಯಾಬಾದ್‌ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನ್ಯಾಯಾಲಯ ಬಂಧನ ವಾರೆಂಟ್‌ ಹೊರಡಿಸಿತ್ತು. ಆದರೂ ಲೀ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಲೀ ವಿರುದ್ಧ ಕೆಳ ನ್ಯಾಲಯದಲ್ಲಿ ದಾವೆ ಹೂಡಿದ್ದ ಜೆಸಿಇ ಕಂಪೆನಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT