ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಂತ ಖರ್ಚಿನಲ್ಲಿ ಡಾಂಬರೀಕರಣ

Last Updated 29 ಮಾರ್ಚ್ 2015, 20:31 IST
ಅಕ್ಷರ ಗಾತ್ರ

ಬೆಂಗಳೂರು: ಜನಪ್ರತಿನಿಧಿಗಳೆಂದರೆ ಜನರ ಶ್ರಮದ ಕಂದಾಯವನ್ನು ಕಂಬಳಿಸುವವರು ಎಂಬುದು ಸಾರ್ವತ್ರಿಕ ಆಪಾದನೆ. ಆದರೆ ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆಗಳಿಗೆ ಡಾಂಬರೀಕರಣ ಮಾಡಿಸುವ ಮೂಲಕ ಮಾದರಿ ಜನಪರ ಕಾಳಜಿ ಮೆರೆದಿದ್ದಾರೆ.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆ ಗ್ರಾಮ ಪಂಚಾಯಿತಿ ಸದಸ್ಯ ಕೆಂಪರಾಜು ಅವರೇ ಪಂಚಾಯಿತಿ ವ್ಯಾಪ್ತಿಯ ವಿಶ್ವಶಾಂತಿ ನಗರದ ರಸ್ತೆಗಳಿಗೆ ಡಾಂಬರೀಕರಣ ಮಾಡಲು ಸ್ವಂತದ ₨5 ಲಕ್ಷ ರೂಪಾಯಿ ನೀಡಿದ ದಾನಿ.

ಡಾಂಬರೀಕರಣಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಂ.ಕಾಂತರಾಜು ಅವರು ಮಾತನಾಡಿ, ‘ಜನಪ್ರತಿ
ನಿಧಿಗಳು ಎನಿಸಿಕೊಂಡವರು ದುಂದು ವೆಚ್ಚ ಮಾಡುವ ಬದಲು ಇಂತಹ ಜನೋಪಯೋಗಿ ಕೆಲಸಗಳನ್ನು ಮಾಡಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT