ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲವೆಡೆ ಸಾಧಾರಣ ಮಳೆ

Last Updated 24 ನವೆಂಬರ್ 2015, 19:34 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಿದೆ.

ತುಮಕೂರಿನಲ್ಲಿ 6 ಸೆಂ.ಮೀ ಮಳೆಯಾಗಿದೆ. ರಾಯಲಪಾಡು, ಕೊರಟಗೆರೆ 5, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ 4, ಕುಣಿಗಲ್ 3, ಬೆಂಗಳೂರು ನಗರ, ಹೆಸರಘಟ್ಟ, ಗೌರಿಬಿದನೂರು, ಗುಡಿಬಂಡೆ 2, ಮಂಡ್ಯ, ನೆಲಮಂಗಲ, ಮಧುಗಿರಿ, ಪಾವಗಡ, ಮಾಗಡಿಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಹಲವೆಡೆ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಬುಧವಾರ (ನ. 25) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯುವ ಸಂಭವವಿದೆ.  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT