ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಚಿತ್ರ ನಿರ್ದೇಶಕ ಗೀತಪ್ರಿಯ ನಿಧನ

Last Updated 17 ಜನವರಿ 2016, 13:25 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡದ ಹಿರಿಯ ಸಿನಿಮಾ ನಿರ್ದೇಶಕ ಹಾಗೂ ಚಿತ್ರ ಸಾಹಿತಿ  ಗೀತಪ್ರಿಯ ಭಾನುವಾರ ಸಂಜೆ ನಿಧನರಾಗಿದ್ದಾರೆ.

ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಗೀತಪ್ರಿಯ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.

1932, ಜೂನ್‌ 15ರಂದು ಗೀತಪ್ರಿಯ ಜನಿಸಿದರು. ಅವರ ಮೂಲ ಹೆಸರು ಲಕ್ಷ್ಮಣ್‌ ರಾವ್‌. ಗೀತಪ್ರಿಯ 1954ರಲ್ಲಿ ಕನ್ನಡ ಸಿನಿಮಾರಂಗ ಪ್ರವೇಶಿಸಿದ್ದರು.  

ಗೀತಪ್ರಿಯ ಅವರು ಒಟ್ಟು 40 ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ.  ಸುಮಾರು 250 ಚಿತ್ರಗಳಿಗೆ ಸಾಹಿತ್ಯ ಬರೆದಿದ್ದಾರೆ.

ಶ್ರಾಮಣ ಸಂಭ್ರಮ, ಹೊಂಬಿಸಿಲು, ಪುಟಾಣಿ ಏಜೆಂಟ್‌ 123, ಬೆಸುಗೆ ಗೀತಪ್ರಿಯ ನಿರ್ದೇಶನದ ಜನಪ್ರಿಯ ಚಿತ್ರಗಳು.

ಗೀತಪ್ರಿಯ ಅವರಿಗೆ ರಾಷ್ಟ್ರಪ್ರಶಸ್ತಿ ಸೇರಿದಂತೆ ಹಲವು ರಾಜ್ಯ ಪ್ರಶಸ್ತಿಗಳು ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT