ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪಾರ್ಸೆಲ್‌ ಕಟ್ಟಡ ಕುಸಿತ

ಮೂವರಿಗೆ ಗಾಯ; ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ
Last Updated 8 ಫೆಬ್ರುವರಿ 2016, 10:22 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಕೇಂದ್ರ ರೈಲ್ವೆ ನಿಲ್ದಾಣದ ಪಾರ್ಸೆಲ್‌ ವಿಭಾಗದ ಕಟ್ಟಡ ಸೋಮವಾರ ಕುಸಿದು ಮೂರು ಮಂದಿ ಗಾಯಗೊಂಡಿದ್ದಾರೆ. ಕಟ್ಟಡದೊಳಗೆ ಇನ್ನೂ ನಾಲ್ಕು ಮಂದಿ ಸಿಲುಕಿರುವ ಶಂಕೆ ಇದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಲ್ಲಿ ಸಿಲುಕಿರುವವರ ಪೈಕಿ ಮಹಿಳೆ ಮತ್ತು ಒಂದು ಮಗು ಕೂಡ ಸೇರಿದೆ ಎನ್ನಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ನಾಲ್ಕು ಜೆಸಿಬಿ ಯಂತ್ರಗಳೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಎರಡು ಮಹಡಿಯ ಈ ಕಟ್ಟಡದಲ್ಲಿ ಪೊಲೀಸ್‌ ಠಾಣೆ ಹಾಗೂ ಪಾರ್ಸೆಲ್‌ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು. ಕಟ್ಟಡ ಹಳೆಯದಾಗಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT