ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಂಡರ್ಸನ್ ವರದಿ ಬಿಡುಗಡೆ ಇಲ್ಲ: ಜೇಟ್ಲಿ

Last Updated 8 ಜುಲೈ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ಮತ್ತು ಚೀನಾ ನಡುವೆ 1962ರಲ್ಲಿ ನಡೆದ ಯುದ್ಧಕ್ಕೆ ಸಂಬಂಧಿಸಿದ ಹೆಂಡರ್ಸನ್ ಬ್ರೂಕ್ಸ್ ವರದಿಯನ್ನು ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಕ್ಷಣಾ ಸಚಿವ ಅರುಣ್‌ ಜೇಟ್ಲಿ ಹೇಳಿದರು.

ರಾಜಕೀಯ ಮತ್ತು ಸೇನಾ ವಲ­ಯ­ದಲ್ಲಿ ಸಂಚಲನ ಮೂಡಿಸ­ಬಹು­­ದಾದ ಈ ವರದಿ ಬಿಡುಗಡೆ ಮಾಡ­ದಿರುವುದರ ಹಿಂದೆ ರಾಷ್ಟ್ರೀಯ ಹಿತಾಸಕ್ತಿ ಅಡಗಿದೆ ಎಂದರು.

ಈ ವರದಿಯನ್ನು ಭಾಗಶಃ ಅಥವಾ ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡುವುದರಿಂದ ಯಾವುದೇ ಉದ್ದೇಶ ಸಾಧಿಸಿದಂತೆ ಆಗುವುದಿಲ್ಲ ಎಂದು ರಾಜ್ಯಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT