ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ನಲ್ಲಿ ಐವರು ಶಂಕಿತ ಉಗ್ರರ ವಶ

ಐಎಸ್‌ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆ
Last Updated 29 ಜೂನ್ 2016, 5:47 IST
ಅಕ್ಷರ ಗಾತ್ರ

ಹೈದರಾಬಾದ್‌ (ಪಿಟಿಐ): ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹೈದರಾಬಾದ್‌ನ ವಿವಿಧ ಕಡೆಗಳಲ್ಲಿ ಮಂಗಳವಾರ ರಾತ್ರಿ ದಾಳಿ ನಡೆಸಿದ್ದು, ಕನಿಷ್ಠ 5 ಮಂದಿ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ.

ಸ್ಥಳೀಯ ಪೊಲೀಸರ ನೆರವಿನಿಂದ ಎನ್‌ಐಎ ಅಧಿಕಾರಿಗಳು ಹೈದರಾಬಾದ್‌ನ ಮೊಘಲ್‌ಪುರ ಮತ್ತು ಭವಾನಿನಗರ ಪ್ರದೇಶದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರು.

‘ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದ್ದರೆಂಬ ಶಂಕೆಯ ಮೇಲೆ ಐದು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಐಎ ವಶಕ್ಕೆ ಪಡೆದಿರುವ ಉಗ್ರರು ಐಎಸ್‌ ಸಂಘಟನೆಯೊಂದಿಗೆ ನಂಟು ಹೊಂದಿರಬಹುದು ಎನ್ನಲಾಗಿದೆ. ಆದರೆ, ಅಧಿಕಾರಿಗಳು ಇದನ್ನು ಖಚಿತ ಪಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT