ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರ್‌ಟಿಇ ಕಾಯ್ದೆ ಉಲ್ಲಂಘಿಸಿದವರು ದೇಶದ್ರೋಹಿಗಳು’

Last Updated 24 ಮೇ 2016, 19:30 IST
ಅಕ್ಷರ ಗಾತ್ರ

ಮೈಸೂರು: ‘ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆ ಉಲ್ಲಂಘಿಸುವ ಖಾಸಗಿ ಶಾಲೆಗಳು ದೇಶದ್ರೋಹಿಗಳು. ಸಚಿವ ಎಚ್‌.ಆಂಜನೇಯ ಈಚೆಗೆ ನೀಡಿರುವ ಹೇಳಿಕೆಯಲ್ಲಿ ಕಿಂಚಿತ್ತೂ ತಪ್ಪಿಲ್ಲ. ಬಳಸಿದ ಭಾಷೆ ಸಭ್ಯವಾಗಿರಬೇಕಿತ್ತು ಅಷ್ಟೆ’ ಎಂದು ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಸಮರ್ಥಿಸಿದರು.

ನಗರದ ಕಲಾಮಂದಿರದಲ್ಲಿ ಮಂಗಳವಾರ ನಡೆದ ‘ನಾವು ಪೌರರು ಮಹಾಪೌರರು’ ಪೌರಕಾರ್ಮಿಕರ ಮಕ್ಕಳ ಸಾಂಸ್ಕೃತಿಕ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

‘ಬಡ ಮಕ್ಕಳಿಗಾಗಿ ಮೀಸಲಿಟ್ಟಿರುವ ಸಾವಿರಾರು ಸೀಟುಗಳನ್ನು ನೀಡಲು ಖಾಸಗಿ ಶಾಲೆಗಳು ಹಿಂದೇಟು ಹಾಕುತ್ತಿವೆ. ಈ ಬಗ್ಗೆ ಮಾತನಾಡುವ ಹಕ್ಕು ಆಂಜನೇಯ ಅವರಿಗಿದೆ. ಅವರ ಆಕ್ರೋಶದಲ್ಲಿ ಅರ್ಥವಿದ್ದು, ಅದು ಕ್ರಾಂತಿಗೆ ಮುನ್ನುಡಿ ಬರೆಯುವಂಥದ್ದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT