ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೃಷಿ ಯಂತ್ರ ಬಾಡಿಗೆ ಕೇಂದ್ರ ವಿಸ್ತರಣೆ’

ತಾಲ್ಲೂಕು ಕಸಬಾ ವಲಯದ ಒಕ್ಕೂಟ ಉದ್ಘಾಟಿಸಿದ ಶಾಸಕ ಟಿ.ವೆಂಕಟರಮಣಯ್ಯ
Last Updated 30 ಮಾರ್ಚ್ 2015, 9:12 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ಸಣ್ಣ ಹಿಡುವಳಿದಾರರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಕೃಷಿ ಯಂತ್ರಗಳ ಬಾಡಿಗೆ ಕೇಂದ್ರಗಳನ್ನು ಎಲ್ಲ ಹೋಬಳಿಗಳಿಗೂ ವಿಸ್ತರಿಸಲಾಗುವುದು’ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ನಗರದ ಮಾಂಗಲ್ಯ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಭಾನುವಾರ ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ವಲಯದ ನೂತನ ಎಂಟು ಒಕ್ಕೂಟ ಉದ್ಘಾಟಿಸಿ ಮಾತನಾಡಿದರು.  ಪ್ರತಿ ಕುಟುಂಬದ ನೆಮ್ಮದಿಗೆ ಆರ್ಥಿಕ ಸ್ವಾವಲಂಬನೆಯೂ ಕಾರಣವಾಗುತ್ತದೆ.  ಸ್ವಸಹಾಯ ಪದ್ಧತಿಯಂತಹ ಯೋಜನೆಗಳು ಮಹಿಳೆಯರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಿದೆ.

ಹಿಂದೆ ಸೋನಿಯಾ ಗಾಂಧಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಜಾರಿಗೊಳಸಿದ ಸ್ತ್ರೀಶಕ್ತಿ ಗುಂಪುಗಳ ರಚನೆಯಿಂದ ಹಲವಾರು ಕುಟುಂಬಗಳು ಆರ್ಥಿಕವಾಗಿ ಸಾಮಾಜಿಕವಾಗಿ ಮುನ್ನಡೆದಿವೆ. ಸರ್ಕಾರದ ಯೋಜನೆಗಳನ್ನು ಮಹಿಳೆಯರು ಉಪಯೋಗಪಡಿಸಿಕೊಳ್ಳಬೇಕು ಎಂದರು.

  ಆರ್ಥಿಕ ಸಬಲೀಕರಣ ಹಾಗೂ ಉಳಿತಾಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಹಿಳೆಯರನ್ನು ಸ್ವಾವಲಂಭಿಗಳನ್ನಾಗಿ ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವನ್ನು ಶ್ಲಾಘಿಸಿದ ಅವರು, ಸಂಸ್ಥೆಯ ಇತರ ಯೋಜನೆಗಳಿಗೆ ತಮ್ಮ ಸಹಕಾರ ನೀಡುವುದಾಗಿ ತಿಳಿಸಿದರು.

  ಜಿಲ್ಲಾ ಯೋಜನಾ ನಿರ್ದೇಶಕ ಶಿವಾನಂದ ಆಚಾರ್ಯ ಮಾತಾನಾಡಿ,  ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯೋಜನೆ ಆರಂಭವಾಗಿ 3 ವರ್ಷಗಳು ಸಂದಿವೆ. ಪ್ರಸ್ತುತ 25 ಜಿಲ್ಲೆಗಳಲ್ಲಿ ಸುಮಾರು 3.6 ಲಕ್ಷ ಸ್ವಸಹಾಯ ಸಂಘಗಳಿವೆ. ಪ್ರಗತಿ ಬಂಧು ಸ್ವಸಹಾಯ ಸಂಘಗಳನ್ನು ರಚಿಸಿದ್ದು, ಸುಮಾರು 36 ಲಕ್ಷ ಜನ ಸದಸ್ಯರು ಯೋಜನೆಯ ಪಾಲುದಾರರಾಗಿದ್ದಾರೆ. ₹12 ಸಾವಿರ ಕೋಟಿ ವಹಿವಾಟು ನಡೆಯುತ್ತಿದ್ದು, ₹1,260 ಕೋಟಿ ಉಳಿತಾಯ ರೂಪದಲ್ಲಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 372 ಒಕ್ಕೂಟಗಳಿದ್ದು, ಯೋಜನೆಗಳು ಪ್ರಗತಿಯಲ್ಲಿವೆ’ ಎಂದರು.

‘ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಮುಂದಿನ ದಿನಗಳಲ್ಲಿ ಮದ್ಯವರ್ಜನ ಶಿಬಿರ, ಗ್ರಾಮೀಣ ಶಾಲೆಗಳಿಗೆ ಪೀಠೋಪಕರಣ, ಕುಡಿಯುವ ನೀರಿನ ಘಟಕಗಳ ವ್ಯವಸ್ಥೆ ಮಾಡಲಾಗುವುದು. ಏ.30 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿರುವ ಸಾಮೂಹಿಕ ವಿವಾಹಗಳಿಗೆ ನೋಂದಣಿ ಮಾಡಿಸುವವರು ದೊಡ್ಡಬಳ್ಳಾಪುರದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿಯೇ ನೋಂದಾವಣಿ ಮಾಡಿಕೊಳ್ಳಲು ಅವಕಾಶವಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಫಲಾನುಭವಿಗಳಿಗೆ ಮಾಸಾಶನ ವಿತರಿಸಲಾಯಿತು. ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಶ್ಯಾಮಲಾ ಲಕ್ಷ್ಮೀಪತಿ ಅಧ್ಯಕ್ಷತೆ ವಹಿಸಿದ್ದರು. ಬಯಾಪ ಅಧ್ಯಕ್ಷ ಆರ್.ಜಿ ವೆಂಕಟಾಚಲಯ್ಯ,  ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಶ್ಯಾಮಲಾ ಲಕ್ಷ್ಮೀಪತಿ, ಎ.ಪಿ.ಎಂ.ಸಿ ಅಧ್ಯಕ್ಷ ತಿ.ರಂಗರಾಜು, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎಚ್.ಅಪ್ಪಯ್ಯಣ್ಣ, ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಂಗಮ್ಮ, ತಾಲ್ಲೂಕು ಯೋಜನಾಧಿಕಾರಿ ರಾಜೇಶ್, ಕಸಬಾ ವಲಯ ಮೇಲವಿಚಾರಕರಾದ ಭಾಗ್ಯ ಹಾಗೂ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT