ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಖೇಲ್‌ ರತ್ನ’ಕ್ಕೆ ಸಾನಿಯಾ ಹೆಸರು

Last Updated 1 ಆಗಸ್ಟ್ 2015, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಅವರ ಹೆಸರನ್ನು ಕ್ರೀಡಾ ಸಚಿವಾಲಯ ಶನಿವಾರ ರಾಜೀವ್‌ ಗಾಂಧಿ ಖೇಲ್‌ ರತ್ನ ಪುರಸ್ಕಾರಕ್ಕೆ ಶಿಫಾರಸು ಮಾಡಿದೆ.

ಹೈದರಾಬಾದ್‌ನ ಆಟಗಾರ್ತಿ ವಿಂಬಲ್ಡನ್‌ ಟೆನಿಸ್‌ ಟೂರ್ನಿಯ ಮಹಿಳೆಯರ ಡಬಲ್ಸ್‌ ವಿಭಾಗದಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದು ಚಾರಿತ್ರಿಕ ಸಾಧನೆ ಮಾಡಿದ್ದರು. ಜತೆಗೆ ವಿಶ್ವ ಕ್ರಮಾಂಕ ಪಟ್ಟಿಯಲ್ಲೂ ಅಗ್ರ ಸ್ಥಾನ ಪಡೆದಿದ್ದರು. ಅವರ ಈ ಸಾಧನೆಗಳನ್ನು ಪರಿಗಣಿಸಿ ಈ ಗೌರವಕ್ಕೆ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

‘ಅಖಿಲ ಭಾರತ ಟೆನಿಸ್‌ ಸಂಸ್ಥೆ ಈ ಪ್ರಶಸ್ತಿಗೆ ಸಾನಿಯಾ ಅವರ ಹೆಸರನ್ನು ತಡವಾಗಿ ಶಿಫಾರಸು ಮಾಡಿದ್ದರೂ ಇದನ್ನು ಕ್ರೀಡಾ ಸಚಿವರು ಪರಿಗಣಿಸಿದ್ದಾರೆ. ಶಿಫಾರಸು ಪತ್ರವನ್ನು  ಕ್ರೀಡಾ ಸಚಿವರು ಪ್ರಶಸ್ತಿ ಆಯ್ಕೆ ಸಮಿತಿಗೆ ಕಳುಹಿಸಿಕೊಟ್ಟಿದ್ದಾರೆ.

ಪ್ರಶಸ್ತಿ ಯಾರಿಗೆ ನೀಡಬೇಕು ಎಂಬುದನ್ನು ಸಮಿತಿಯೇ ನಿರ್ಧರಿಸಲಿದೆ’ ಎಂದು ಕ್ರೀಡಾ ಸಚಿವಾಲಯದ ಕಾರ್ಯದರ್ಶಿ ಅಜಿತ್ ಶರಣ್‌ ತಿಳಿಸಿದ್ದಾರೆ.

ಒಂದು ಮೂಲದ ಪ್ರಕಾರ ಸ್ಕ್ವಾಷ್‌ ಆಟಗಾರ್ತಿ ದೀಪಿಕಾ ಪಳ್ಳಿಕಲ್‌ ಮತ್ತು ಡಿಸ್ಕಸ್‌ ಎಸೆತ ಸ್ಪರ್ಧಿ ವಿಕಾಸ್‌ ಗೌಡ ಅವರಿಂದ ಸಾನಿಯಾಗೆ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT