ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗವರ್ನರ್‌ ಮೂಲಕ ಆಡಳಿತ ನಡೆಸಲು ಮೋದಿ ಮುಂದಾಗಿದ್ದಾರೆ’

Last Updated 22 ಮೇ 2015, 10:43 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಲೆ.ಗವರ್ನರ್‌ ಮೂಲಕ ದೆಹಲಿಯಲ್ಲಿ ಆಡಳಿತ ನಡೆಸಲು ಮೋದಿ ಮುಂದಾಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ಅಧಿಕಾರಿಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಲೆ.ಗವರ್ನರ್‌ ಅವರಿಗೂ ಇದೆ ಎಂದು ಕೇಂದ್ರ ಗೃಹ ಇಲಾಖೆಯು ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್‌ ಈ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಸಂಪೂರ್ಣವಾಗಿ ಸೋತಿದೆ. ಈಗ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಎಎಪಿಯ ಭ್ರಷ್ಟಚಾರ ವಿರುದ್ಧದ ಕ್ರಮಗಳಿಂದ ಹೆದರಿರುವ ಬಿಜೆಪಿ ಲೆ.ಗವರ್ನರ್‌ ಮೂಲಕ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಈ ಅಧಿಸೂಚನೆಯು ಬಿಜೆಪಿಯ ಮತ್ತೊಂದು ಸೋಲು ಎಂದು ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಗೃಹ ಇಲಾಖೆಯ ಈ ಆದೇಶವನ್ನು ಹಲವು ಎಎಪಿ ಮುಖಂಡರು ಖಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT