ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮದ ಜನರ ವಿಶ್ವಾಸ ಗಳಿಸಿ’

Last Updated 6 ಜುಲೈ 2015, 7:09 IST
ಅಕ್ಷರ ಗಾತ್ರ

ಯಾದಗಿರಿ: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಬೇಕು ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ನಾಗನಗೌಡ ಕಂದಕೂರ ಹೇಳಿದರು.

ನಗರದ ಜೆಡಿಎಸ್‌ ಕಚೇರಿಯಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷರನ್ನು ಸನ್ಮಾನಿಸಿ ಅವರು ಮಾತನಾಡಿದರು. ಬರುವ ಹಣವನ್ನು ಸದ್ಬಳಕೆ ಮಾಡಿಕೊಂಡು ರಸ್ತೆ, ನೀರು ಸರಬರಾಜು, ಶೌಚಾಲಯ ನಿರ್ಮಾಣ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.

ಮುಂಬರುವ ದಿನಗಳಲ್ಲಿ ಜನರ ವಿಶ್ವಾಸವನ್ನು ಉಳಿಸಿಕೊಂಡು ಹೋಗಬೇಕು. ತಾಲ್ಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಶ್ರಮವಹಿಸಿ, ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಹೇಳಿದರು. ತಾಲ್ಲೂಕಿನ ಚಂಡ್ರಕಿ, ಹೊನಗೇರಾ, ಕಾಕಲವಾರ, ಚಿನ್ನಾಕಾರ, ಯಲಸತ್ತಿ, ಕಂದಕೂರ, ಪುಟಪಾಕ ಮತ್ತು ಪಸಪುಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು.

ಯುವ ಜೆಡಿಎಸ್‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ, ನವಾಜರಡ್ಡಿ ಚಪೇಟ್ಲಾ, ಜಿ. ತಮ್ಮಣ್ಣ, ವಿಶ್ವನಾಥ ಸರವಾರ, ಭಾರತಿ ಶಿವರಾಯ, ಶಂಭುರೆಡ್ಡಿ ಕೆ.ಶಹಾಪೂರ, ವಿಶ್ವನಾಥರೆಡ್ಡಿ, ಭೀಮರೆಡ್ಡಿ ಚಂಡ್ರಕಿ, ಮಲ್ಲಿಕಾರ್ಜುನ ತಾತಳಗೇರಾ, ಬಸನಗೌಡ ಮಗ್ದಂಪುರ, ಶರಣು ಆವಂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT