ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಾನಪದ ಸಂಭ್ರಮ’

Last Updated 4 ಜುಲೈ 2014, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ಆಧುನಿಕ  ಬದುಕಿನ ಭರಾಟೆಯಲ್ಲಿ  ಜನಪದ  ಕಲೆಗಳು ನಶಿಸುತ್ತಿದ್ದು, ಅವುಗಳನ್ನು  ಉಳಿಸಿ ಬೆಳೆಸಬೇಕಾದ ಅಗತ್ಯವಿದೆ’ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್‌ ಹೇಳಿದರು. ಬೆಂಗಳೂರು ವಕೀಲರ ಸಾಹಿತ್ಯ ಕೂಟವು ನಗರದಲ್ಲಿ ಶುಕ್ರವಾರ   ಏರ್ಪ­ಡಿಸಿದ್ದ ‘ಜಾನಪದ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಜನಪದ ಸಂಸ್ಕೃತಿಯು  ಮನುಷ್ಯನ ಮಾನವೀಯ ಗುಣಗಳನ್ನು ಅರಳಿಸುವ  ಶಕ್ತಿ ಹೊಂದಿದೆ.  ರಾಜ್ಯದಲ್ಲಿ 147  ಜನಪದ ಕಲಾಪ್ರಕಾರಗಳು ಅಸ್ತಿತ್ವ­ದಲ್ಲಿವೆ. ಮುಂದಿನ ದಿನಗಳಲ್ಲಿ   ಕಲಾ­­­ಪ್ರಕಾರ­ಗಳ ಸಂಖ್ಯೆ ಇಳಿಕೆಯಾಗಲಿದೆ’ ಎಂದರು.

ನ್ಯಾಯಮೂರ್ತಿ ಹುಲವಾಡಿ ಜಿ.ರಮೇಶ್ ಮಾತನಾಡಿ,  ‘ಪಾಶ್ಚಿ­ಮಾತ್ಯ ಸಂಸ್ಕೃತಿ ಬಗ್ಗೆ ಹೆಚ್ಚು ಒಲವು ಹೊಂದಿರುವ ನಗರಗಳಲ್ಲಿ ಆಚರಣೆ ನೆಲಕಚ್ಚಿವೆ ಎಂದರು. ವಕೀಲರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ,  ಬೆಂಗಳೂರು ವಕೀಲರ ಸಾಹಿತ್ಯ ಕೂಟದ ಅಧ್ಯಕ್ಷ ಸಿ.ಪ್ರಕಾಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT