ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜ್ಞಾನದೇಗುಲ–2015’ 30ರಿಂದ

‘ಪ್ರಜಾವಾಣಿ’ ಬಳಗದಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
Last Updated 27 ಮೇ 2015, 7:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವೃತ್ತಿಪರ ಆಯ್ಕೆ ಕುರಿತು ಚಿಂತನೆಯಲ್ಲಿರುವ ವಿದ್ಯಾರ್ಥಿಗಳು, ಪೋಷಕರಿಗೆ ನೆರವಾಗುವ ಸಲುವಾಗಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗದ ಆಶ್ರಯದಲ್ಲಿ ‘ಜ್ಞಾನ ದೇಗುಲ–2015’ ಶೈಕ್ಷಣಿಕ ಮೇಳವು ಇದೇ 30 ಹಾಗೂ 31ರಂದು ಇಲ್ಲಿನ ಗೋಕುಲ ಗಾರ್ಡನ್‌ನಲ್ಲಿ ನಡೆಯಲಿದೆ.

ವಿದ್ಯಾರ್ಥಿಗಳಿಗಾಗಿ ಪತ್ರಿಕೆಯು ಕಳೆದ 6 ವರ್ಷಗಳಿಂದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತಿದೆ. ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿ ಇಂತಹದ್ದೊಂದು ಬೃಹತ್‌ ಶೈಕ್ಷಣಿಕ ಮೇಳ ಆಯೋಜಿಸಲಾಗಿದೆ. ಎರಡೂ ದಿನ ಬೆಳಿಗ್ಗೆ 10ರಿಂದ ರಾತ್ರಿ 8ರ ತನಕ ಮೇಳ ನಡೆಯಲಿದೆ. ಸಿಇಟಿ/ ಕಾಮೆಡ್‌–ಕೆ ಪರೀಕ್ಷೆ ಬರೆದು ಕೌನ್ಸೆಲಿಂಗ್‌ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. 

ರಾಜ್ಯದ  ವಿಶ್ವವಿದ್ಯಾಲಯಗಳು, ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಈ ಮೇಳದಲ್ಲಿ ಪಾಲ್ಗೊಳ್ಳುತ್ತಿವೆ. ಎಂಜಿನಿಯರಿಂಗ್‌, ವೈದ್ಯಕೀಯ, ವಾಸ್ತುಶಿಲ್ಪ, ಬ್ಯಾಂಕಿಂಗ್‌, ಬಿಸಿನೆಸ್‌ ಮ್ಯಾನೇಜ್‌ಮೆಂಟ್‌, ಏರೋನಾಟಿಕ್ಸ್‌, ಅನಿಮೇಶನ್‌, ವ್ಯವಹಾರ ನಿರ್ವಹಣೆ ಮೊದಲಾದ ವಿಷಯಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳಲಿವೆ. ಉಚಿತ ಪ್ರವೇಶವಿದೆ.  www.jnanadegula.in  ವೆಬ್‌ಸೈಟ್‌ನಲ್ಲಿ ಆಸಕ್ತರು ಹೆಸರು ನೋಂದಾಯಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT