ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವರಾಜ ಅರಸು ಮಾನವತಾವಾದಿ’

Last Updated 19 ಸೆಪ್ಟೆಂಬರ್ 2014, 9:27 IST
ಅಕ್ಷರ ಗಾತ್ರ

ನಾಗಮಂಗಲ: ‘ಹಿಂದುಳಿದ ಸಮಾಜಗಳಿಗೆ ಮಾತ್ರವಲ್ಲದೆ ಎಲ್ಲ  ವರ್ಗಗಳ ಶೋಷಿತ ಜನಾಂಗದ ಧ್ವನಿಯಾಗಿದ್ದ ಡಿ. ದೇವರಾಜ ಅರಸು ಅವರು ಮಾನವತಾವಾದಿಯೇ ಸರಿ’ ಎಂದು ಶಾಸಕ ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯಿತಿ ಮಂಡ್ಯ, ತಾಲ್ಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ನಾಗಮಂಗಲ ಇವರ ಆಶ್ರಯದಲ್ಲಿ ಪಟ್ಟಣದ ಮಿವಿಧಾನಸೌಧದ ಆವರಣದಲ್ಲಿ ಏರ್ಪಡಿಸಲಾಗಿದ್ದ ಡಿ. ದೇವರಾಜ ಅರಸು ಅವರ 99ನೇ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು.

ಅರಸು ಅವರು ತಮ್ಮ ಆಡಳಿತದ ಅವಧಿಯಲ್ಲಿ ಜೀತ ಪದ್ಧತಿಯ ರದ್ದತಿಗೆ ದಿಟ್ಟ ಹೆಜ್ಜೆ ಇಟ್ಟರು. ಹಿಂದುಳಿದ ಮತ್ತು ಅಲ್ಪ ಸಂಖ್ಯಾತ ವರ್ಗದ ಜನರ ಹಿತದೃಷ್ಟಿಯಿಂದ ಪ್ರಪ್ರಥಮವಾಗಿ ಪ್ರತ್ಯೇಕ ಇಲಾಖೆಯನ್ನು ಕೊಟ್ಟು, ಶೋಷಿತರ ಧ್ವನಿಯಾದರು ಎಂದರು.

ತಹಶೀಲ್ದಾರ್‌ ಶಿವಲಿಂಗಮೂರ್ತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮೂಡ್ಲಿಗೌಡ ಮಾತನಾಡಿದರು. ನಿವೃತ ಪ್ರಾಂಶುಪಾಲ ವಿಜಯದಾಸ್ ಅರಸು ರವರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕಳೆದ ಸಾಲಿನಲ್ಲಿ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರೇಗೌಡ, ಶಿವಣ್ಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣೆ ಅಧಿಕಾರಿ ಬೆಟ್ಟಸ್ವಾಮಿ ಗೌಡ, ಪಟ್ಟಣ ಪಂಚಾಯಿತಿ ಸದಸ್ಯರಾದ ಅನ್ಸರ್‌ ಪಾಷ, ನೂರ್‌ಮಹಮದ್, ಡಿಎಸ್ಎಸ್ ಜಿಲ್ಲಾ ಸಂಚಾಲಕ ನಾಗರಾಜಯ್ಯ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಗಂಗಾರಾಂ ಉಪಸ್ಥಿತರಿದ್ದರು. ಹಿಂದುಳಿದ ವರ್ಗ ಇಲಾಖೆಯ ಅಧಿಕಾರಿ ಮಂಜುನಾಥ್‌, ವಸತಿ ನಿಲಯದ ವಿದ್ಯಾರ್ಥಿಗಳು  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT