ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಿಗಮ, ಮಂಡಳಿಗೆ ಶೀಘ್ರ ನೇಮಕ’

Last Updated 30 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ: ನಿಗಮ, ಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿ ಪ್ರಕ್ರಿಯೆ ಸದ್ಯದಲ್ಲೇ ಅಂತಿಮಗೊಳ್ಳ­ಲಿದೆ ಎಂದು ಮುಖ್ಯಮಂತ್ರಿ ಸಿದ್ದ­ರಾಮಯ್ಯ ಮಂಗಳವಾರ ತಿಳಿಸಿದರು.

‘ಖಾಸಗಿ ಭೇಟಿಗಾಗಿ ದೆಹಲಿಗೆ ಬಂದಿರುವೆ. ಕಾಂಗ್ರೆಸ್‌ ಮುಖಂಡರನ್ನು ಭೇಟಿಯಾಗುವ ಉದ್ದೇಶವಿಲ್ಲ. ಶೀಘ್ರವೇ ರಾಜ್ಯ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಅವರ ಜತೆಗೂಡಿ ಬರುತ್ತೇನೆ. ಆಗ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿಗೆ ಒಪ್ಪಿಗೆ ಪಡೆಯಲಾ­ಗುವುದು’ ಎಂದು ಮುಖ್ಯ­ಮಂತ್ರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಆದರೆ, ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಏನನ್ನೂ ಹೇಳಲಿಲ್ಲ.

ತಮಿಳುನಾಡು ಮುಖ್ಯಮಂತ್ರಿ ಜಯ­ಲಲಿತಾ ಅವರಿಗೆ ಶಿಕ್ಷೆಯಾದ ಬಳಿಕ ರಾಜ್ಯದ ಕಾನೂನು–ಸುವ್ಯವಸ್ಥೆ ಬಿಗಿ­ಗೊಳಿಸ­ಲಾಗಿದೆ. ಬೆಂಗಳೂರು ಸೇರಿ ಕರ್ನಾಟಕದಲ್ಲಿರುವ ತಮಿಳರ ಸುರಕ್ಷತೆಗೆ ಕ್ರಮಗಳನ್ನು ಕೈಗೊಳ್ಳಲಾ­ಗಿದೆ. ತಮಿಳುನಾಡಿನಲ್ಲಿರುವ ಕನ್ನಡಿ­ಗರಿಗೂ ಅಲ್ಲಿನ ಸರ್ಕಾರ ಭದ್ರತೆ ಒದಗಿಸಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಜಯಲಲಿತಾ ಪ್ರಕರಣದ ವಿಚಾರಣೆ ನಡೆಸಿ, ತೀರ್ಪು ನೀಡಿರುವ ವಿಶೇಷ ನ್ಯಾಯಾಲಯದಲ್ಲಿ ಪಬ್ಲಿಕ್‌ ಪ್ರಾಸಿ­ಕ್ಯೂಟರ್‌ ಆಗಿದ್ದ ಭವಾನಿ ಸಿಂಗ್‌ ಅವರನ್ನೇ ಹೈಕೋರ್ಟ್‌ನಲ್ಲೂ ಮುಂದು­­ವರಿಸಲಾಗುವುದೇ? ಎನ್ನುವ ಪ್ರಶ್ನೆಗೆ, ಉಚ್ಚ ನ್ಯಾಯಾಲಯದ ಆದೇಶ­ದಂತೆ ಸರ್ಕಾರ ನಡೆದು­ಕೊಳ್ಳುತ್ತದೆ ಎಂದರು.

ಅಭಿನಂದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯ­ಮೂರ್ತಿ ಎಚ್‌.ಎಲ್‌. ದತ್ತು ಅವರನ್ನು ಭೇಟಿಯಾಗಿ ಅಭಿನಂದಿಸಿದರು.  ಅದೊಂದು ಸೌಜನ್ಯದ ಭೇಟಿ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT