ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಿಯಮಾವಳಿ ಪ್ರಕಾರ ತೀರ್ಮಾನ’

Last Updated 8 ಜುಲೈ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಲೋಕ­ಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ನಿಯಮಾವಳಿ ಮತ್ತು ಕಟ್ಟಳೆ­ಗಳಿಗೆ ಅನುಗುಣವಾಗಿಯೇ ತೀರ್ಮಾನ ತೆಗೆದುಕೊಳ್ಳ­ಲಾಗು­ತ್ತದೆ ಎಂದು ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದರು.

ಈ ವಿಷಯದಲ್ಲಿ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದು ಅವರು  ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.  ಲೋಕಸಭೆಯ ಒಟ್ಟು ಬಲದಲ್ಲಿ ಶೇ 10ರಷ್ಟು ಸದಸ್ಯರನ್ನು ಹೊಂದಿರುವ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನಮಾನ ನೀಡುವುದು ಮೊದಲ ಸ್ಪೀಕರ್‌ ಜಿ.ವಿ.ಮಾಳವಂಕರ್‌ ಅವಧಿ ಯಿಂ­ದಲೂ ನಡೆದುಕೊಂಡು ಬಂದಿದೆ ಎಂದರು.

ನಿಯಮಾವಳಿ ಬದಲಾಯಿಸಿ 44 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನ ನೀಡಿದರೆ, ಮುಂದೆ 30 ಅಥವಾ 20 ಸದಸ್ಯ ಬಲ ಹೊಂದಿರುವ ಪಕ್ಷಕ್ಕೂ ವಿರೋಧ ಪಕ್ಷದ ಸ್ಥಾನಮಾನ ನೀಡಲು ಬದ­ಲಾವಣೆ ಮಾಡಬೇಕಾಗುತ್ತದೆ ಎಂದು ಅಭಿಪ್ರಾಯ­ಪಟ್ಟರು.

ವಿರೋಧ ಪಕ್ಷದ ನಾಯಕ ಸ್ಥಾನ ನೀಡದೆ ಇದ್ದರೆ ನ್ಯಾಯಾಲಯದ ಮೊರೆ ಹೋಗಲು ಕಾಂಗ್ರೆಸ್‌
ಚಿಂತನೆ ನಡೆಸಿರುವ ಕುರಿತು ಪ್ರಶ್ನಿಸಿದಾಗ, ಕೋರ್ಟ್‌ಗೆ ಹೋಗಲು ಪ್ರತಿಯೊಬ್ಬರಿಗೂ ಅವಕಾಶ ಇದೆ ಎಂದರು.

ಬ್ರಹ್ಮೋಸ್‌ ಪ್ರಯೋಗ ಯಶಸ್ವಿ
ಭುವನೇಶ್ವರ (ಐಎಎನ್‌ಎಸ್‌):
ಸುಮಾರು 290 ಕಿ.ಮೀ. ದೂರ ಕ್ರಮಿಸುವ ಸಾಮರ್ಥ್ಯದ, 300 ಕೆ.ಜಿ. ಸಾಂಪ್ರದಾಯಿಕ ಸಿಡಿತಲೆ ಹೊರಬಲ್ಲ   ಬ್ರಹ್ಮೋಸ್‌ ಶಬ್ದಾತೀತ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಮಂಗಳವಾರ ಒಡಿಶಾದ ಸೇನಾ ನೆಲೆಯಿಂದ ಯಶಸ್ವಿಯಾಗಿ ನಡೆಸಲಾಯಿತು.

‘ಭಾರತ ಮತ್ತು ರಷ್ಯ ಜಂಟಿ ಸಹಭಾಗಿತ್ವದಲ್ಲಿ ಕ್ಷಿಪಣಿ­ಯನ್ನು ಅಭಿವೃದ್ಧಿಪಡಿಸಲಾಗಿದೆ. ಸಬ್‌ಮೆರಿನ್‌, ಹಡಗು ಮತ್ತು ವಿಮಾನದ ಮೂಲಕ ಕ್ಷಿಪಣಿಯನ್ನು ಉಡಾವಣೆ ಮಾಡಬಹುದು’ ಎಂದು ಪರೀಕ್ಷಾರ್ಥ ವಿಭಾಗದ ನಿರ್ದೇಶಕ ಎಂ.ವಿ.ಕೆ.ವಿ. ಪ್ರಸಾದ್‌ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT