ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾಪ್ರಭುತ್ವದ ಕಗ್ಗೊಲೆ’: ಸೋನಿಯಾ ವಾಗ್ದಾಳಿ

Last Updated 4 ಆಗಸ್ಟ್ 2015, 13:08 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಲಾಪಕ್ಕೆ ಅಡ್ಡಿ ಪಡಿಸುತ್ತಿದ್ದ 25 ಕಾಂಗ್ರೆಸ್‌ ಸದಸ್ಯರನ್ನು ಅಮಾನತು ಮಾಡಿರುವ ಸ್ಪೀಕರ್‌ ಕ್ರಮವನ್ನು ಕಾಂಗ್ರೆಸ್‌ ಅಧ್ಯಕ್ಷ ಸೋನಿಯಾ ಗಾಂಧಿ ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಕರೆದಿದ್ದು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲ, ಇಡೀ ದೇಶವೇ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ಚೌಹಾಣ್‌ ಅವರ ರಾಜೀನಾಮೆಗೆ ಆಗ್ರಹಿಸುತ್ತಿದೆ  ಎಂದು ಅವರು ಮಂಗಳವಾರ ಸಂಸತ್‌ ಭವನದ ಮುಂದೆ ನಡೆದ ಪ್ರತಿಭಟನೆ ವೇಳೆ ತಿಳಿಸಿದರು.

ಸೋನಿಯಾ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ಅಮ್ಮ–ಮಗನ  ಆಡಳಿತದಲ್ಲಿರುವ ಕಾಂಗ್ರೆಸ್‌ ಪಕ್ಷದಲ್ಲೇ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT