ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಂಗಳೂರು ವಿ.ವಿ ನೋಡಬನ್ನಿ’ ಕಾರ್ಯಕ್ರಮ ನಾಳೆಯಿಂದ

Last Updated 10 ಜೂನ್ 2015, 19:49 IST
ಅಕ್ಷರ ಗಾತ್ರ

ಮಂಗಳೂರು: ಪದವಿ ಓದಿದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಅಧ್ಯಯನದಲ್ಲಿರುವ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ‘ಮಂಗಳೂರು ವಿಶ್ವವಿದ್ಯಾಲಯ ನೋಡಬನ್ನಿ’ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಮಂಗಳೂರು ವಿಶ್ವವಿದ್ಯಾಲಯ ಹಮ್ಮಿಕೊಂಡಿದೆ.

ಇದೇ 12 ಮತ್ತು 13ರಂದು ಕೊಣಾಜೆಯ ಮಂಗಳ ಗಂಗೋತ್ರಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡಲು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸಜ್ಜಾಗಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಸಹಾಯ ಕೇಂದ್ರಗಳನ್ನು ತೆರೆದು ವಿವಿಧ ವಿಭಾಗಗಳಿಗೆ ತೆರಳಲು ಮಾರ್ಗದರ್ಶನ ಮಾಡಲಾಗುವುದು. ಇದಕ್ಕಾಗಿ ನಗರದ ಪ್ರಮುಖ ಭಾಗಗಳಿಂದ ವಿವಿಗೆ ಬಸ್‌ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಸ್ನಾತಕೋತ್ತರ ಅಧ್ಯಯನ ಸಂದರ್ಭದಲ್ಲಿ ಬಳಸುವ ಪ್ರಯೋಗಾಲಯ, ಸಂಶೋಧನೆಗೆ ಬಳಸುವ ಪ್ರಯೋಗಾಲಯ, ಗ್ರಂಥಾಲಯ, ವಿಶ್ವವಿದ್ಯಾಲಯಕ್ಕೆ ವಿವಿಧ ಇಲಾಖೆಗಳಿಂದ ದೊರೆಯುವ ಸಂಶೋಧನಾ ಯೋಜನೆಗಳ ಮಾಹಿತಿಯನ್ನೂ ನೀಡಲಾಗುವುದು.

ಅಗತ್ಯವಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಕೊಡುವ ಮಾಹಿತಿಯನ್ನೂ ಬ್ಯಾಂಕ್‌ಗಳು ನೀಡಲಿವೆ ಎಂದು ಕುಲಪತಿ ಪ್ರೊ.ಕೆ.ಭೈರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT