ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ಭದ್ರತೆ: ನಾಗರಿಕರೂ ವಿಫಲ’

Last Updated 1 ಆಗಸ್ಟ್ 2014, 20:13 IST
ಅಕ್ಷರ ಗಾತ್ರ

ಬೆಂಗಳೂರು: ‘ಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವ ವಿಷಯದಲ್ಲಿ ರಾಜ್ಯ ಸರ್ಕಾರ ಮಾತ್ರವಲ್ಲ; ನಾಗರಿಕರೂ ವಿಫಲರಾಗಿದ್ದಾರೆ. ಎಲ್ಲರೂ ಸೇರಿ ಸುರಕ್ಷಿತ ವಾತಾವರಣ ನಿರ್ಮಿಸುವುದು ಅಗತ್ಯವಾಗಿದೆ’ ಎಂದು ರಾಜ್ಯಸಭೆ ಸದಸ್ಯ ರಾಜೀವ್‌ ಚಂದ್ರಶೇಖರ್‌ ಪ್ರತಿಪಾದಿಸಿದ್ದಾರೆ.

‘ಮಕ್ಕಳ ರಕ್ಷಣೆ, ಪೋಷಣೆ ಮತ್ತು ಹೊಣೆ ಸಮಾಜದ ಆದ್ಯ ಕರ್ತವ್ಯ. ಮುಗ್ಧ ಕಂದಮ್ಮಗಳ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆದರೆ ಇದಕ್ಕೆ ಎಲ್ಲರೂ ಹೊಣೆ. ಇಂಥ ಪ್ರಕರಣಗಳ ಬಗ್ಗೆ ಸಮರ್ಪಕ ತನಿಖೆ ಆಗಬೇಕು. ದುಷ್ಕೃತ್ಯಗಳನ್ನು ಸಹಿಸಲು ಅಸಾಧ್ಯ ಎಂಬ ಸಂದೇಶವನ್ನು ಶಿಶು­ಕಾಮಿಗಳಿಗೆ ರವಾನಿಸಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

‘ವಿಬ್ಗಯೊರ್ ಶಾಲೆಯಲ್ಲಿ ವಿದ್ಯಾ­ರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪೊಲೀಸರ ಗೊಂದಲಮಯ ಹೇಳಿಕೆಗಳು ವ್ಯವಸ್ಥೆ ಮೇಲಿನ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT