ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಿಳಾ ಮೀಸಲಾತಿ ಮಸೂದೆ ಅಗತ್ಯವಿದೆ’

Last Updated 19 ನವೆಂಬರ್ 2014, 9:14 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಲಿಂಗ ತಾರತಮ್ಯ ಸರಿದೂಗಿಸುವ ನಿಟ್ಟಿನಲ್ಲಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ನೀಡುವ ಅಗತ್ಯವಿದೆ ಎಂದು ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಅವರು ಬುಧವಾರ ಅಭಿಪ್ರಾಯ ಪಟ್ಟಿದ್ದಾರೆ. ನವೆಂಬರ್ 24ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ.

ಭಾರತದಲ್ಲಿ ಬಾಲಕಿಯರ ಸ್ಥಿತಿಗತಿ ವರದಿಯನ್ನು ಇಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ಸಿಗಬೇಕೆಂಬುದು ನನ್ನ ಆಶಯ’ ಎಂದು ನುಡಿದರು.

ಈ ನಿಟ್ಟಿನಲ್ಲಿ ತಮ್ಮ ಸರ್ಕಾರ ಅಪಾರ ಕ್ರಮಗಳನ್ನು ಕೈಗೊಂಡಿದ್ದು, ಲೋಕಸಭೆಯಲ್ಲಿ ಮಸೂದೆಗೆ ಅನುಮೋದನೆ ಸಿಗಬೇಕು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಅವರು ಆಶಿಸಿದರು.  

ಯುಪಿಎ ಆಡಳಿತಾವಧಿಯಯಲ್ಲಿ ಈ ಮಸೂದೆಯು ರಾಜ್ಯಸಭೆಯಲ್ಲಿ ಅನುಮೋದನೆ ಪಡೆದಿದ್ದು, ಲೋಕಸಭೆಯಲ್ಲಿ ಅನುಮೋದನೆ ಪಡೆಯುವುದು ಬಾಕಿ ಇದೆ.

ಮುಂದಿನ ವಾರ ಆರಂಭಗೊಳ್ಳಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗಲಿದೆಯೇ? ಎಂಬ ಪ್ರಶ್ನೆಗೆ ಅವರು, ಈ ಪ್ರಶ್ನೆಯನ್ನು ನೀವು ಸಂಸದೀಯ ವ್ಯವಹಾರಗಳ ಸಚಿವರಿಗೆ ಕೇಳಬೇಕು ಎಂದು ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ ಸೇರಿದಂತೆ ಆಡಳಿತಾರೂಢ ಬಿಜೆಪಿ ಈ ಮಸೂದೆಗೆ ಬೆಂಬಲ ಸೂಚಿಸಿವೆ. ಆದರೆ ಕೆಲವು ಪ್ರಾದೇಶಿಕ ಪಕ್ಷಗಳು ಇದನ್ನು ವಿರೋಧಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT