ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುವಪೀಳಿಗೆ ಜವಾಬ್ದಾರಿ ಅರಿಯಲಿ’

Last Updated 3 ಮಾರ್ಚ್ 2015, 19:49 IST
ಅಕ್ಷರ ಗಾತ್ರ

ಯಲಹಂಕ: ಯುವಪೀಳಿಗೆಯು ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್‌.ಶಿವಣ್ಣ ಹೇಳಿದರು.

ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿ­ಸಿರುವ ಏಳು ದಿನಗಳ ರಾಷ್ಟ್ರೀಯ ಭಾವೈಕ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡುವುದರ ಜೊತೆಗೆ ಸಾಮಾ­ಜಿಕ ನ್ಯಾಯದ ಬಗ್ಗೆ ಕಳಕಳಿ ಬರಲು ಸಾಧ್ಯವಾಗುತ್ತದೆ. ವಿವಿಧ ರಾಜ್ಯಗಳ ಕಲೆ, ಸಂಸ್ಕೃತಿ ಹಾಗೂ ಪರಂಪರೆ­ಯನ್ನು ವಿನಿಮಯ ಮಾಡಿ­ಕೊಳ್ಳಲು ಸಹಕಾರಿಯಾಗು­ತ್ತದೆ ಎಂದರು.

ಶಿಬಿರದಲ್ಲಿ ರಾಜ್ಯದ ಏಳು ವಿವಿಧ ವಿಶ್ವವಿದ್ಯಾಲಯಗಳಿಂದ ಹಾಗೂ ಆಂಧ್ರಪ್ರದೇಶ, ಒಡಿಶಾ, ಕೇರಳ, ತಮಿಳುನಾಡು ಮತ್ತು ಪುದುಚೆರಿ ರಾಜ್ಯ­­ಗಳಿಂದ ಒಟ್ಟು 150 ಸ್ವಯಂ­ಸೇವಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ ಎಂದು ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ಡಾ.ಬಿ.ಕೃಷ್ಣಮೂರ್ತಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT