ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯದ ನೀರಾವರಿ ಕ್ಷೇತ್ರ 59.25 ಲಕ್ಷ ಎಕರೆ’

Last Updated 28 ಜುಲೈ 2014, 20:01 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 59,25,551 ಎಕರೆ ಜಮೀನಿಗೆ ನೀರಾವರಿ ಒದಗಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.­ಪಾಟೀಲ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸೋಮವಾರ ಕೆ.ಆರ್.ರಮೇಶ್‌ಕುಮಾರ್‌ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು ಬೃಹತ್‌ ಮತ್ತು ಮಧ್ಯಮ ನೀರಾವರಿ ಯೋಜನಾ ಕಾಮಗಾರಿಗಳಿಗೆ 2011­–12ರಲ್ಲಿ ₨6789.95 ಕೋಟಿ, 2012–13ರಲ್ಲಿ  ₨7044.28 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಯಶವಂತರಾಯಗೌಡ ವಿಠ್ಠಲ­ಗೌಡ ಪಾಟೀಲ ಅವರ ಪ್ರಶ್ನೆಗೆ ಉತ್ತ­ರಿಸಿದ  ಅವರು, ಆಲಮಟ್ಟಿ, ನಾರಾಯ­ಣ­ಪುರ ಜಲಾಶಯಗಳಿಂದ  ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮೀಸ­ಲಾಗಿಟ್ಟ ಪ್ರಮಾಣಕ್ಕೆ ಅನುಗುಣವಾಗಿ ನೀರಿನ ಹಂಚಿಕೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT