ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೈಕ್ಷಣಿಕ ಸಾಧನೆ: ಉಡುಪಿ ಮಾದರಿ’

ಪ್ರಜಾವಾಣಿ ವಾರ್ತೆ
Last Updated 30 ಜುಲೈ 2015, 6:24 IST
ಅಕ್ಷರ ಗಾತ್ರ

ಕೊಲ್ಲೂರು (ಬೈಂದೂರು): ಉಡುಪಿ ಜಿಲ್ಲೆಯು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ರಾಜ್ಯಮಟ್ಟದಲ್ಲಿ ಉನ್ನತ ಸಾಧನೆ ದಾಖಲಿಸುತ್ತ ಬಂದಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಇದರ ಹಿಂದೆ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಬೋಧಕರ ಶ್ರಮವಿದೆ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ. ಪ್ರಸನ್ನ ಹೇಳಿದರು.

ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಮತ್ತು ಕೊಲ್ಲೂರು ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಈಚೆಗೆ ನಡದ ಸಂಘದ ವಾರ್ಷಿಕ ಸಭೆ, ನಿವೃತ್ತ ಪ್ರಾಂಶುಪಾಲರ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಸಂಘದ ಅಧ್ಯಕ್ಷೆ ಕೆ. ಇಂದಿರಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆರ್‌. ಬಿ. ನಾಯಕ್ ಸಂಘದ ‘ಕಡೆಗೋಲು’ ಕೈಪಿಡಿ ಬಿಡುಗಡೆ ಗೊಳಿಸಿದರು.

ನಿವೃತ್ತರಾದ ಪದ್ಯಾಣ ಪರಮೇಶ್ವರ ಭಟ್, ಎಸ್. ರಾಧಾಮಣಿ, ಪಿ.ಕೆ. ಮೋಹನನ್, ನರೋನಾ, ರಾಮ ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಮಟ್ಟಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪ್ರಸಕ್ತ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸ್ಥಳೀಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅರುಣ ಕುಮಾರ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಮೇಟಿ ಮುದಿಯಪ್ಪ ವರದಿ ಮಂಡಿಸಿದರು.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಷಿ ವಂದಿಸಿದರು. ಉಪನ್ಯಾಸಕ ಎಂ. ವಾಸುದೇವ ಉಡುಪ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT