ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೋಷಿತರ ಪ್ರಗತಿಗೆ ಶಿಕ್ಷಣವೇ ಅಸ್ತ್ರ’

Last Updated 28 ಜನವರಿ 2015, 11:19 IST
ಅಕ್ಷರ ಗಾತ್ರ

ಚಾಮರಾಜನಗರ: ‘ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಶಿಕ್ಷಣ ಮತ್ತು ಸಂಘಟನೆಯೇ ಅಸ್ತ್ರ. ಹೀಗಾಗಿ, ಶಿಕ್ಷಣ ಪಡೆದು ಸಾಮಾಜಿಕ ಬದಲಾವಣೆಗೆ ಮುಂದಾಗಬೇಕು’ ಎಂದು  ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ಹೇಳಿದರು.

ನಗರದ ಶ್ರೀಕಾಳಿದಾಸ ವಿದ್ಯಾರ್ಥಿನಿಲಯದ ಆವರಣದಲ್ಲಿ ಈಚೆಗೆ ನಡೆದ ತಾಲ್ಲೂಕು ಶ್ರೀಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬುದ್ಧನ ಜ್ಞಾನದ ಸಂದೇಶ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ರಾಣಿ ಅಹಲ್ಯಬಾಯಿ ಹೊಳ್ಕರ್ ಅವರ ಹೋರಾಟ ನಮಗೆ ಸ್ಫೂರ್ತಿಯಾಗಬೇಕು. ಸೌಲಭ್ಯ ಪಡೆಯಲು ಸಂಘಟನ್ಮಾತಕ ಹೋರಾಟ ಅಗತ್ಯ ಎಂದರು.

ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ. ಸೋಮಶೇಖರ್ ಮಾತನಾಡಿ, ಸಣ್ಣ ಸಮುದಾಯಗಳು ಶಿಕ್ಷಣ ಪಡೆದು ಸಂಘಟಿತರಾದಾಗ ಮಾತ್ರ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯ. ಶೋಷಿತ ಸಮುದಾಯಗಳ ಅಭಿವೃದ್ಧಿ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೈಸೂರು ಇಎಸ್ಐ ಆಸ್ಪತ್ರೆಯ ವೈದ್ಯ ಡಾ.ಮಾಲೇಗೌಡ ಮಾತನಾಡಿ, ಪಾರದರ್ಶಕತೆ, ನಿಸ್ವಾರ್ಥ ಸೇವೆ, ಬದ್ಧತೆಯಿಂದ ಸಂಘದ ಅಭಿವೃದ್ಧಿಗೆ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.

ಕನಕಪುರದ ಸುವರ್ಣಮುಖಿ ಆಶ್ರಮದ ಆಚಾರ್ಯ ಡಾ.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಖಜಾನೆ ಇಲಾಖೆಯ ಉಪ ನಿರ್ದೇಶಕ ಮುದ್ದರಾಜು, ಬಿಸಿಎಂ ಅಧಿಕಾರಿ ಶಿವಕುಮಾರ್, ಸಹಕಾರ ಇಲಾಖೆಯ ಕೆ.ಸಿ. ಕೃಷ್ಣ, ವಾಣಿಜ್ಯ ತೆರಿಗೆ ಇಲಾಖೆಯ ವಾರೇಶ್, ಅಕ್ಷರ ದಾಸೋಹ ಅಧಿಕಾರಿ  ಸೋಮಣ್ಣೇಗೌಡ, ಕನಕ ನೌಕರರ ಸಂಘದ ಅಧ್ಯಕ್ಷ ನಿಂಗೇಗೌಡ,  ವೆಂಕಟನಂಜೇಗೌಡ,  ಬಸಪ್ಪನಪಾಳ್ಯ ನಟರಾಜು,  ಜನ್ನೂರು ಮಹದೇವ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT