ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಸ್ಕೃತ ಭಾಷೆ–ಪದಗಳ ವೈಭವ’

Last Updated 6 ಫೆಬ್ರುವರಿ 2014, 7:30 IST
ಅಕ್ಷರ ಗಾತ್ರ

ಉಡುಪಿ:‘ಸಂಸ್ಕೃತ ಭಾಷೆಯಲ್ಲಿ ಬಳಸುವ ಪ್ರತಿ ಪದಕ್ಕೂ ವಿಶಿಷ್ಠವಾದ ಅರ್ಥಗಳಿವೆ. ಈ ಪದಗಳ ಬಗ್ಗೆ     ಸರಿಯಾಗಿ ಅರ್ಥ ಮಾಡಿಕೊಂಡಲ್ಲಿ ಪದಗಳ ವೈಭವವನ್ನು ಕಂಡುಕೊಳ್ಳಬಹುದು ಎಂದು ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ಹೇಳಿದರು.

ಉಡುಪಿಯ ಪೂರ್ಣ ಪ್ರಜ್ಞ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪದವಿ ಕಾಲೇಜುಗಳ ಸಂಸ್ಕೃತ ಸಾಂಸ್ಕೃತಿಕ ಸ್ಪರ್ಧೆ ‘ಸಂಸ್ಕೃತ ವೈಭವ ದರ್ಶನಂ’ ಉದ್ಘಾಟಿಸಿ ಅವರು ಮಾತನಾಡಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ವಿದ್ವಾನ್ ಹರಿನಾರಾಯಣ ಅಸ್ರಣ್ಣ, ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಜಿ.ಎಸ್.ಚಂದ್ರಶೇಖರ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಕೆ.ಸದಾಶಿವ ರಾವ್ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ವಿವಿ ವ್ಯಾಪ್ತಿಯ ೧೩ ಕಾಲೇಜುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಉಜಿರೆ ಎಸ್‌ಡಿಎಂಗೆ ಪ್ರಶಸ್ತಿ:  ಸಂಸ್ಕೃತ ಸಾಂಸ್ಕೃತಿಕ ಸ್ಪರ್ಧೆ ‘ಸಂಸ್ಕೃತ ವೈಭವ ದರ್ಶನಂ’ನಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ದ್ವಿತೀಯ ಬಹುಮಾನ ಪಡೆಯಿತು.

ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬಿ. ವಿಜಯ ಬಲ್ಲಾಳ್‌, ಕಾಲೇಜಿನ ಕೋಶಾಧಿಕಾರಿ ಪ್ರದೀಪ್‌ ಕುಮಾರ್,  ಪ್ರಾಂಶುಪಾಲ ಕೆ.ಸದಾಶಿವ ರಾವ್,  ಉಪನ್ಯಾಸಕಿ  ವಿಜಯಲಕ್ಷ್ಮಿ  ಉಪಸ್ಥಿತರಿದ್ದರು.
ಉಪನ್ಯಾಸಕಿ ಸಹನಾ ಸ್ವಾಗತಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಟಿ.ಎಸ್. ರಮೇಶ್ ವಂದಿಸಿದರು. ಮಧು ಭಟ್  ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT